Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಕ್ತದಾನಿಗಳ ದಿನ ಹೊಸ ರಕ್ತದಾನಿಗಳಿಗೆ...

ರಕ್ತದಾನಿಗಳ ದಿನ ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿ: ಡಿಎಚ್‌ಓ ಡಾ.ನಾಗಭೂಷಣ ಉಡುಪ

14 Jun 2023 7:49 PM IST
share
ರಕ್ತದಾನಿಗಳ ದಿನ ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಲಿ: ಡಿಎಚ್‌ಓ ಡಾ.ನಾಗಭೂಷಣ ಉಡುಪ

ಉಡುಪಿ, ಜೂ.14: ಜಿಲ್ಲೆಯಲ್ಲಿ ರಕ್ತದಾನಿಗಳ ಸಂಖ್ಯೆ ಸಾಕಷ್ಟಿದ್ದು, ತುರ್ತು ಸಂದರ್ಭಗಳಲ್ಲಿ ಇವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ರಕ್ತದಾನ ಮಾಡುತ್ತಿದ್ದಾರೆ. ರಕ್ತದಾನಿಗಳ ದಿನಾಚರಣೆಯು ಹೊಸ ರಕ್ತದಾನಿಗಳಿಗೆ ಪ್ರೇರಣೆ ನೀಡಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೇಳಿದ್ದಾರೆ. 

ಉದ್ಯಾವರದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಭಾವಪ್ರಕಾಶ ಆಡಿಟೋರಿ ಯಂನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ, ಜಿಲ್ಲಾಆಸ್ಪತ್ರೆ, ಲಯನ್ಸ್‌ಕ್ಲಬ್ ಉಡುಪಿ ಲಕ್ಷ್ಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾದ್ಯಾಲಯದ ರೆಡ್‌ಕ್ರಾಸ್ ಘಟಕ ಮತ್ತು ಎನ್ನೆಸ್ಸೆಸ್ ಘಟಕಗಳ  ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಮಮತಾ ಕೆ. ಮಾತನಾಡಿ, ರಕ್ತದಾನ ಮಹಾದಾನವಾಗಿದ್ದು, ರಕ್ತದ ಕೊರತೆಯಿಂದ ಹಲವು ಮನುಷ್ಯ ಜೀವಗಳು ಸಾವನ್ನಪ್ಪುತ್ತಿದ್ದು, ಯುವಜನತೆ ರಕ್ತದ ಅವಶ್ಯಕತೆಯನ್ನು ಮನಗಂಡು ರಕ್ತದಾನ ಮಾಡಬೇಕು ಎಂದರು.

ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಪ್ರಾಸ್ತಾವಿಕ ವಾಗಿ ಮಾತನಾಡಿ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹವಾದ ರಕ್ತವನ್ನು ಜಾತಿ, ಮತ, ಬಡವ, ಶ್ರೀಮಂತ ಎಂಬ ಬೇಧವಿಲ್ಲದೇ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ವಿವಿ ಜಿಲ್ಲೆಗಳ ಆಸ್ಪತ್ರೆಗಳಿಗೂ ನೀಡುತ್ತಿದ್ದು, ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಕನಿಷ್ಠ ನಾಲ್ಕು ಜನರ ಜೀವ ಉಳಿಸಲು ಸಾಧ್ಯವಿದೆ ಎಂದರು. 

ಯುವಜನತೆ ರಕ್ತದಾನಕ್ಕೆ ಮುಂದಾಗಬೇಕು. ಅಲ್ಲದೇ ಇತರರಿಗೂ ಜಾಗೃತಿ ಮೂಡಿಸಿ ರಕ್ತದಾನ ಮಾಡಲು ಪ್ರೇರೇಪಿಸುವಂತೆ ತಿಳಿಸಿದ ಅವರು, ಮಹಿಳೆಯರು ಕೂಡ ರಕ್ತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು. ಶಾಲಾ-ಕಾಲೇಜುಗಳ ರಜೆಯ ಕಾರಣ ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ರಕ್ತದ ಕೊರತೆ ಕಂಡುಬರುತ್ತಿದ್ದು, ಅಂತಹ ಸಮಯದಲ್ಲಿ ವಿದ್ಯಾರ್ಥಿಗಳು ಜಿಲ್ಲಾಆಸ್ಪತ್ರೆಯ ರಕ್ತನಿಧಿ ಕೇಂದ್ರಗಳಿಗೆ ಹಾಗೂ ರಕ್ತದಾನ ಶಿಬಿರಗಳಿಗೆ ತೆರಳಿ ರಕ್ತದಾನ ಮಾಡುವಂತೆ ತಿಳಿಸಿದರು.

ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಸಹಾಯಕ ಪ್ರಾಧ್ಯಾಪಕ ಡಾ.ಸಂದೇಶ್‌ಕುಮಾರ್ ಶೆಟ್ಟಿ, ಸುಹಾಸ್ ಹೆಗಡೆ, ರಾಕೇಶ್ ಸುವರ್ಣ, ಅನುರಾಧ ಉದ್ಯಾವರ ಹಾಗೂ ಆಶಾ ಶಿವರಾಮ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ರಕ್ತದಾನ ಮತ್ತು ರಕ್ತದಾನದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಸರ್ಜನ್ ಡಾ.ಸುದೇಶ್‌ಕುಮಾರ್, ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ರಮೇಶ್ ಕೆ.ಶೆಟ್ಟಿ, ಎಸ್‌ಡಿಎಂ ಆಯುರ್ವೇದ ಕಾಲೇಜಿನ ಯೂತ್ ರೆಡ್‌ಕ್ರಾಸ್‌ನ ಅಸೋಸಿಯೇಟ್ ಡೀನ್ ಡಾ.ಮೊಹಮ್ಮದ್ ಫೈಸಲ್ ಹಾಗೂ ಇತರರು ಉಪಸ್ಥಿತರಿದ್ದರು.

ಕಾಲೇಜಿನ ಕಮ್ಯುನಿಟಿ ಸರ್ವಿಸ್ ಡೀನ್ ಡಾ. ವಿದ್ಯಾಲಕ್ಷ್ಮೀ ಕೆ ಸ್ವಾಗತಿಸಿ, ವಿದ್ಯಾರ್ಥಿನಿ ಸಿರಿ ಮರವಂತೆ ಕಾರ್ಯಕ್ರಮ ನಿರೂಪಿಸಿದರು. ಡೀನ್ ಡಾ. ಯೋಗೀಶ್ ಆಚಾರ್ಯ ವಂದಿಸಿದರು.

share
Next Story
X