ಮಂಗಳೂರು: ಅಧಿಕ ದರ ವಸೂಲಿ ಆರೋಪ; ರಿಕ್ಷಾ ಚಾಲಕರ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜೂ.14: ನಿಗದಿತ ದರಕ್ಕಿಂತ ಅಧಿಕ ದರ ವಸೂಲಿ ಮಾಡಿದ ಆರೋಪದ ಮೇರೆಗೆ ಆಟೊರಿಕ್ಷಾ ಚಾಲಕರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ವಾರ ವಿಶೇಷ ಕಾರ್ಯಾಚರಣೆ ನಡೆಸಿ 120 ಕ್ಕೂ ಅಧಿಕ ಆಟೊರಿಕ್ಷಾಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 7 ಆಟೊರಿಕ್ಷಾ ಚಾಲಕರು ಮೀಟರ್ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವುದು ಕಂಡು ಬಂದಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
Next Story