Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 4.69 ಕೋ. ಮೌಲ್ಯದ ಜಾಗ ಕೇವಲ 88 ಲಕ್ಷ...

4.69 ಕೋ. ಮೌಲ್ಯದ ಜಾಗ ಕೇವಲ 88 ಲಕ್ಷ ರೂ.ಗೆ ಮಾರಾಟ !

ಉಡುಪಿ ಎಂಪಿಎಂಸಿ ಅವ್ಯವಹಾರ ವಿರುದ್ಧ ವ್ಯಾಪಾರಸ್ಥರಿಂದ ಪ್ರತಿಭಟನೆ

14 Jun 2023 8:45 PM IST
share
4.69 ಕೋ. ಮೌಲ್ಯದ ಜಾಗ ಕೇವಲ 88 ಲಕ್ಷ ರೂ.ಗೆ ಮಾರಾಟ !
ಉಡುಪಿ ಎಂಪಿಎಂಸಿ ಅವ್ಯವಹಾರ ವಿರುದ್ಧ ವ್ಯಾಪಾರಸ್ಥರಿಂದ ಪ್ರತಿಭಟನೆ

ಉಡುಪಿ, ಜೂ.14: ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಯು ಆದಿಉಡುಪಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿರುವ 4.69ಕೋಟಿ ಮೌಲ್ಯದ ಜಾಗವನ್ನು ಕೇವಲ 88ಲಕ್ಷ ರೂ.ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಹಂಚಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿರುವ ವರ್ತಕರು,  ಕೂಡಲೇ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಈ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸ್ದಿದ್ದಾರೆ.

ಉಡುಪಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಇಂದು ಪ್ರತಿಭಟನೆ ನಡೆಸಿದ ವ್ಯಾಪಾರಸ್ಥರು, ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ 10-15ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಅಧಿಕಾರಿಗಳ ಅನುಮತಿ ಪಡೆದು ವರ್ಷದ ಹಿಂದೆ 2-3ಲಕ್ಷ ರೂ. ಖರ್ಚು ಮಾಡಿ ಗೋದಾಮು ನಿರ್ಮಿಸಿಕೊಂಡಿದ್ದೇವೆ. ಆದರೆ ಈಗ ನಮ್ಮ ಗೋದಾಮು ತೆರವುಗೊಳಿಸುವಂತೆ ಹೇಳುತ್ತಿದ್ದಾರೆ. ನಾವು ವ್ಯಾಪಾರ ಮಾಡುವ ಜಾಗವನ್ನು ಅಧಿಕಾರಿಗಳು ಬೇರೆಯವರಿಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಹಂಚಿಕೆ ಮಾಡುತ್ತಿದ್ದಾರೆ ಎಂದು ದೂರಿದರು.

11 ಸೈಟ್‌ನ್ನು ಕೇವಲ 88ಲಕ್ಷ ರೂ.ಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಆದರೆ ನಾವು ಗೋದಾಮು ನಿರ್ಮಿಸುವಾಗ ಅಧಿಕಾರಿಗಳು ನಮ್ಮಿಂದ ಸಾವಿರಾರು ರೂ. ಹಣ ಲಂಚದ ಹಣ ಪಡೆದುಕೊಂಡಿದ್ದಾರೆ. ಈ ನಮ್ಮಿಂದ ಈ ಜಾಗವನ್ನು ಕಿತ್ತುಕೊಳ್ಳುವುದರಿಂದ 25-30 ವ್ಯಾಪಾರಸ್ಥರು ಬೀದಿಗೆ ಬರಲಿದ್ದಾರೆ. ಆದುದರಿಂದ ಇದನ್ನು ಕೂಡಲೇ ರದ್ದು ಪಡಿಸಬೇಕು ಎಂದು ವ್ಯಾಪಾರಸ್ಥ ಲಕ್ಷ್ಮಣ್ ಒತ್ತಾಯಿಸಿದರು.

ಬಳಿಕ ಈ ಕುರಿತು ಎಂಪಿಎಂಸಿ ಆಡಳಿತಾಧಿಕಾರಿ ಗೋಪಾಲ ಕಾಕನೂರು ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು, ವ್ಯಾಪಾರಸ್ಥರಾದ ಫಯಾಝ್, ಬಸಯ್ಯ, ಪ್ರಭು ಗೌಡ, ಚಂದ್ರ, ರಾಘಣ್ಣ, ಸೈಯ್ಯದತ್, ರಮೇಶ್ ಪೈ, ವಿವಿಧ ಸಂಘಟನೆಗಳ ಮುಖಂಡರಾದ ಸುಭಾಷಿತ್ ಕುಮಾರ್, ವೇದಾವತಿ ಹೆಗ್ಡೆ, ಚಿನ್ಮಯ ಮೂರ್ತಿ, ಧೀರಜ್, ಸುರೇಶ್ ಆರ್.ಪಿ., ರೈತ ಮುಖಂಡ ರಾಘವೇಂದ್ರ ಉಪ್ಪೂರು, ರಾಧಾಕೃಷ್ಣ ಶೆಟ್ಟಿ, ರಾಧಾಕೃಷ್ಣ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.

"ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಅರೆ ಸರಕಾರಿ ಸಂಸ್ಥೆ ಯಾಗಿದ್ದು, ಇದರ ಖಾಸಗಿ ಜಾಗವನ್ನು ಇಲಾಖೆಯಿಂದ ಅಧಿಕೃತ ಲೈಸೆನ್ಸ್ ಪಡೆದ ಅರ್ಹ ಪೇಟೆ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ಇಲ್ಲಿನ 14 ಸಾಮಾನ್ಯ ನಿವೇಶನಗಳಿಗೆ ಇಲಾಖೆ ನಿಗದಿಪಡಿಸಿದ ದರ ಪ್ರತಿ ಚದರಡಿಗೆ 376ರೂ.ನಂತೆ ಲೀಸ್ ಕಂ ಸೇಲ್ ಆಧಾರದಲ್ಲಿ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈವರೆಗೆ 11ಮಂದಿ ಅರ್ಜಿ ಹಾಕಿದ್ದಾರೆ. ಈಗ ಕೆಲವು ವ್ಯಾಪಾರಸ್ಥರು ಮಾಡುತ್ತಿರುವ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು".
-ಗೋಪಾಲ ಕಾಕನೂರು, ಪ್ರಭಾರ ಆಡಳಿತಾಧಿಕಾರಿ, ಎಪಿಎಂಸಿ ಉಡುಪಿ

share
Next Story
X