Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಾದಿತ ಎಪಿಎಂಸಿ ಕಾಯ್ದೆ ರದ್ದು: ಸಚಿವ...

ವಿವಾದಿತ ಎಪಿಎಂಸಿ ಕಾಯ್ದೆ ರದ್ದು: ಸಚಿವ ಎಚ್.ಕೆ.ಪಾಟೀಲ್

14 Jun 2023 8:58 PM IST
share
ವಿವಾದಿತ ಎಪಿಎಂಸಿ ಕಾಯ್ದೆ ರದ್ದು: ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಜೂ.14:ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಿ,  ಹಳೆ ಕಾಯ್ದೆಯ ಮೂಲ ಸ್ವರೂಪ ಉಳಿಸಿಕೊಂಡು ಸುಧಾರಿತ ರೂಪದಲ್ಲಿ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಕೃಷಿ ಮಾರುಕಟ್ಟೆ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಯ್ದೆಯ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆ ನಡೆಸಲಾಗಿದೆ. ಇನ್ನೂ,ಎಪಿಎಂಸಿ ತಿದ್ದುಪಡಿ ವಿಧೇಯಕವನ್ನು ಜುಲೈನಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಲಾಗುವುದು. ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತಜ್ಞರ ಅಭಿಪ್ರಾಯ ಪಡೆದು ವಿಧೇಯಕಕ್ಕೆ ಅಂತಿಮ ರೂಪ ನೀಡಲಾಗುವುದು ಎಂದು ಹೇಳಿದರು.

ಹಿಂದಿನ ಸರಕಾರದ ಅವಧಿಯಲ್ಲಿ ರೈತರ ಕಲ್ಯಾಣವನ್ನು ಬದಿಗೊತ್ತಿ ಕೃಷಿ ಮಾರುಕಟ್ಟೆ ಸಮಿತಿಗಳ ಸತ್ವ ಹಾಗೂ ಶಕ್ತಿಯನ್ನು ತೆಗೆದು ಹಾಕುವ, ಸಡಿಲಗೊಳಿಸುವ ತಿದ್ದುಪಡಿ ಮಾಡಲಾಗಿತ್ತು. ರೈತರಿಂದ ವಿರೋಧವಾದ ನಂತರ ಕೇಂದ್ರ ಸರಕಾರ ವಿಧೇಯಕಗಳನ್ನು ವಾಪಸ್ ಪಡೆದರೂ, ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ಪುನರುಜ್ಜೀವನಗೊಳಿಸಿರಲಿಲ್ಲ. ಹೀಗಾಗಿ ನಾವು ಎಪಿಎಂಸಿ ಕಾಯಿದೆಯ ಮೂಲ ಸ್ವರೂಪವನ್ನು ಉಳಿಸಿಕೊಂಡು ರೈತರಿಗೆ ಅನುಕೂಲವಾಗುವ ಅಂಶಗಳನ್ನು ಉಳಿಸಿ ಮತ್ತಷ್ಟು ಸುಧಾರಿತ ರೂಪದಲ್ಲಿ ವಿಧೇಯಕ ತರುತ್ತಿದ್ದೇವೆ ಅವರು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ನಾನು ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಸಭೆ ನಡೆಸಿ ಸುರ್ದೀಘವಾದ ಚರ್ಚೆ ಮಾಡಿದ್ದೇವೆ ಎಂದ ಅವರು, ಕರ್ನಾಟಕದ ಎಪಿಎಂಸಿ ಕಾಯ್ದೆ ರಾಷ್ಟ್ರಕ್ಕೆ ಮಾದರಿಯಾಗಿತ್ತು. ರೈತರ ಹಿತಕಾಪಾಡುವ ನಿಟ್ಟಿನಲ್ಲಿ ಸುಧಾರಿತ ರೂಪದಲ್ಲಿ ಇನ್ನು ಹೆಚ್ಚಿನ ಮಾದರಿಯಾಗುವಂತೆ ತಿದ್ದುಪಡಿ ತರಲಾಗುವುದು. ತಿದ್ದುಪಡಿ ಕಾಯ್ದೆಯಡಿ ಖಾಸಗಿ ಮಾರುಕಟ್ಟೆ ಯಾರ್ಡ್‍ಗಳು, ದಲ್ಲಾಳಿಗಳು ಕೂಡನಿಯಂತ್ರಣಕ್ಕೆ ಒಳಪಡುತ್ತಾರೆ. ಎಪಿಎಂಸಿ ಒಳಹಾಗೂಹೊರಗೆ ಒಂದೇ ಧಾರಣೆ ದೊರೆಯುವಂತೆ ಆಗಬೇಕು ಎಂದು ಸಚಿವರು ಹೇಳಿದರು.

ಮತ್ತೊಂದೆಡೆ ವ್ಯಾಜ್ಯ ನಿರ್ವಹಣಾ ಪದ್ಧತಿಯಲ್ಲೇ ಲೋಪ ಇದ್ದು, ರಾಜ್ಯ ಸರಕಾರ 1.85 ಲಕ್ಷ ಪ್ರಕರಣಗಳಲ್ಲಿ ಸೋತಿದೆ. ಹೀಗಾಗಿ, ವ್ಯಾಜ್ಯ ನಿರ್ವಹಣೆಯಲ್ಲಿ ಸರಕಾರದ ಹಾಗೂ ರಾಜ್ಯದ ಹಿತ ಕಾಪಾಡುವ ಉದ್ದೇಶದಿಂದ ಸಿಪಿಸಿಗೆ ತಿದ್ದುಪಡಿ ತರುತ್ತೇವೆ. ಮುಂದೆಈ ರೀತಿ ಆಗಬಾರದು ಎಂಬ ಕಾರಣಕ್ಕಾಗಿ ತಿದ್ದುಪಡಿ ವಿಧೇಯಕವನ್ನು ತರಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
Next Story
X