ಮಂಗಳೂರು: ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆ

ಮಂಗಳೂರು, ಜೂ.14: ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯ ಬಳಿ ಬುಧವಾರ ಮಾದಕ ವಸ್ತು ಪತ್ತೆಯಾಗಿದ್ದು, ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಇಬ್ರಾಹೀಂ ಖಲೀಲ್ ಎಂಬ ವಿಚಾರಣಾಧೀನ ಕೈದಿಯನ್ನು ಬುಧವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರಾಗೃಹಕ್ಕೆ ಕರೆತಂದಾಗ ಮಾದಕ ವಸ್ತು ‘ಎಂಡಿಎಂಎ’ ಲಭಿಸಿದೆ ಎನ್ನಲಾಗಿದೆ.
ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





