Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದುತ್ವ ಗುಂಪುಗಳ ಮಹಾಪಂಚಾಯತ್ ಗೆ...

ಹಿಂದುತ್ವ ಗುಂಪುಗಳ ಮಹಾಪಂಚಾಯತ್ ಗೆ ಅನುಮತಿ ನಿರಾಕರಿಸಿದ ಉತ್ತರಕಾಶಿ ಆಡಳಿತ

14 Jun 2023 9:54 PM IST
share
ಹಿಂದುತ್ವ ಗುಂಪುಗಳ ಮಹಾಪಂಚಾಯತ್ ಗೆ ಅನುಮತಿ ನಿರಾಕರಿಸಿದ ಉತ್ತರಕಾಶಿ ಆಡಳಿತ

ಡೆಹ್ರಾಡೂನ್: ಹಿಂದುತ್ವ ಗುಂಪುಗಳು ಜೂನ್ 15ಕ್ಕೆ ಕರೆದಿರುವ ಮಹಾಪಂಚಾಯತ್ ಗೆ ಉತ್ತರಾಖಂಡ ರಾಜ್ಯದ ಉತ್ತರಕಾಶಿ ಜಿಲ್ಲಾಡಳಿತ ಮಂಗಳವಾರ ಅನುಮತಿ ನಿರಾಕರಿಸಿದೆ.

ಇಬ್ಬರು ವ್ಯಕ್ತಿಗಳು 14 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಲು ಯತ್ನಿಸಿದ್ದಾರೆನ್ನಲಾದ ಘಟನೆಯ ಬಳಿಕ ಈ ಬೆಳವಣಿಗೆಗಳು ಸಂಭವಿಸಿವೆ. ಜೂನ್ 15ರೊಳಗೆ ಅಂಗಡಿಗಳನ್ನು ಮುಚ್ಚಿ ರಾಜ್ಯದಿಂದ ಹೊರಹೋಗಬೇಕು ಎಂಬುದಾಗಿ ಘಟನೆಯ ಬಳಿಕ ಹಿಂದುತ್ವ ಗುಂಪುಗಳು ಮುಸ್ಲಿಮ್ ವ್ಯಾಪಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ, ಉತ್ತರಕಾಶಿಯ ಪುರೋಲ ಪಟ್ಟಣದಲ್ಲಿ ಉದ್ವಿಗ್ನತೆ ನೆಲೆಸಿದೆ.

ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದಾರೆನ್ನಲಾದ ಸ್ಥಳೀಯ ಅಂಗಡಿ ಮಾಲೀಕ ಉಬೇದ್ ಖಾನ್ (24) ಮತ್ತು ಓರ್ವ ಮೋಟರ್ ಸೈಕಲ್ ಮೆಕ್ಯಾನಿಕ್ ಜಿತೇಂದ್ರ ಸೈನಿ (23)ಯನ್ನು ಘಟನೆ ನಡೆದ ಒಂದು ದಿನದ ಬಳಿಕ, ಅಂದರೆ ಮೇ 27ರಂದು ಪೊಲೀಸರು ಬಂಧಿಸಿದ್ದಾರೆ.

ಅಪಹರಣವು ‘‘ಲವ್ ಜಿಹಾದ್’’ ಆಗಿದೆ ಎಂದು ಹಿಂದುತ್ವ ಗುಂಪುಗಳು ಆರೋಪಿಸಿವೆ. ಇದನ್ನು ಪ್ರತಿಭಟಿಸಲು ಹಿಂದುತ್ವ ಗುಂಪುಗಳು ಜೂನ್ 15ರಂದು ಮಹಾಪಂಚಾಯತ್ ನಡೆಸಲು ಕರೆ ನೀಡಿವೆ. ಹಿಂದುತ್ವ ಪರವಾಗಿರುವ ಗ್ರಾಮ ಮುಖ್ಯಸ್ಥರ ಸಂಘಟನೆ ಪುರೋಲ ಪ್ರಧಾನ್ ಸಂಘಟನ್ ಈ ಪಂಚಾಯತನ್ನು ಸಂಘಟಿಸಿದೆ.

‘‘ಜೂನ್ 15ರಂದು ಮಹಾಪಂಚಾಯತ್ ನಡೆಸಲು ಪುರೋಲ ಪ್ರಧಾನ್ ಸಂಘಟನ್ಗೆ ನಾವು ಅನುಮತಿ ನಿರಾಕರಿಸಿದ್ದೇವೆ’’ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ದೇವಾನಂದ ಶರ್ಮ ಹೇಳಿದರು. ‘‘ಸೋಮವಾರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿ ಜೊತೆ ಶಾಂತಿ ಸಭೆ ನಡೆಸಿದ ಬಳಿಕ, ಪ್ರತಿಭಟನೆಗೆ ಅನುಮತಿ ಕೋರುವ ಅರ್ಜಿಯನ್ನು ವಾಪಸ್ ಪಡೆದಿದ್ದೇವೆ ಎಂದು ಸಂಘಟಕರು ಲಿಖಿತ ಹೇಳಿಕೆ ನೀಡಿದ್ದಾರೆ’’ ಎಂದರು.

ಮಹಾಪಂಚಾಯತ್ ವಿರುದ್ಧದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಜೂನ್ 15ಕ್ಕೆ ಕರೆನೀಡಲಾಗಿರುವ ಮಹಾಪಂಚಾಯತ್ ಅನ್ನು ನಿಷೇಧಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಈ ವಿಷಯದಲ್ಲಿ ಅರ್ಜಿದಾರರು ಹೈಕೋರ್ಟ್ ಗೆ ಹೋಗಬಹುದು ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ರಜಾ ಕಾಲದ ನ್ಯಾಯಪೀಠವೊಂದು ತೀರ್ಪು ನೀಡಿದೆ. ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.

ಅರ್ಜಿದಾರರು ಹೈಕೋರ್ಟ್ ಮೇಲೆ ನಂಬಿಕೆ ಇಡಬೇಕು ಎಂದು ನ್ಯಾಯಮೂರ್ತಿ ಅಮಾನುಲ್ಲಾ ಹೇಳಿದರು. ‘‘ಹೈಕೋರ್ಟ್ ಗೆ ಹೋಗುವುದಕ್ಕೆ ನೀವು ಯಾಕೆ ಹಿಂದೇಟು ಹಾಕುತ್ತಿದ್ದೀರಿ? ಈ ನ್ಯಾಯಾಲಯದಿಂದ ಸೂಚನೆ ಹೊರಟರೆ ಹೈಕೋರ್ಟ್ ಆದೇಶ ನೀಡುತ್ತದೆ’’ ಎಂದರು.

share
Next Story
X