ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ಮತ್ತೆ ಜೂನ್ 30 ರವರೆಗೆ ವಿಸ್ತರಣೆ

ಬೆಂಗಳೂರು, ಜೂ.14: ವಿದ್ಯಾರ್ಥಿಗಳಿಗೆ ಬಸ್ ಪಾಸ್‍ಗಾಗಿ ಅರ್ಜಿ ಸಲ್ಲಿಸಲು ಜೂ.12ರಿಂದ ಗೋ-ಲೈವ್ ನಿಡಿ ಅವಕಾಶ ಕಲ್ಪಿಸಲಾಗಿದೆ.
ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲ ವರ್ಗದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ(2022-23) ಬಸ್ ಪಾಸ್‍ನೊಂದಿಗೆ ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ, ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿ ಹಾಜರುಪಡಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ, ಕಾಲೇಜುಗಳಿಗೆ ಉಚಿತವಾಗಿ ತೆರಳಲು ಜೂ.30ರವರೆಗೆ ಅನುವು ಮಾಡಿಕೊಡಲಾಗಿದೆ.
ಅಲ್ಲದೆ, ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರು ರಾಜ್ಯದೊಳಗೆ ಪ್ರಯಾಣಿಸುವಾಗ ಸರಕಾರದಿಂದ ವಿತರಿಸಿರುವ ಯಾವುದಾದರೂ ಗುರುತಿನ ಚೀಟಿಯನ್ನು ತೋರಿಸಿ ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಬೇಕಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Next Story





