Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಳ ಸೇತುವೆಗಳಲ್ಲಿ ನೀರು ಪ್ರಮಾಣ...

ಕೆಳ ಸೇತುವೆಗಳಲ್ಲಿ ನೀರು ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಮಳೆಗಾಲದ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ

14 Jun 2023 11:24 PM IST
share
ಕೆಳ ಸೇತುವೆಗಳಲ್ಲಿ ನೀರು ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಮಳೆಗಾಲದ ಸಿದ್ಧತೆ ಕುರಿತು ಅಧಿಕಾರಿಗಳ ಸಭೆ

ಬೆಂಗಳೂರು, ಜೂ.14: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೆ ರೀತಿಯ ಸಮಸ್ಯೆ ಆಗದಂತೆ ಕೂಡಲೆ ಸಿಸಿ ಟಿವಿ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 53 ಕೆಳಸೇತುವೆಗಳು ಬರಲಿದ್ದು, ಈ ಪೈಕಿ 41 ಕೆಳಸೇತುವೆಗಳಲ್ಲಿ ಈಗಾಗಲೇ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಾಕಿ 12 ಕೆಳಸೇತುವೆಗಳಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಬೇಕಿದ್ದು, ಕೂಡಲೆ ಅಗತ್ಯ ಕಾಮಗಾರಿ ನಡೆಸಬೇಕು ಎಂದು ಹೇಳಿದರು.

ನಗರದಲ್ಲಿ 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಿದ್ದು, ಅದರಲ್ಲಿ 118 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ನೀಡಲಾಗಿದೆ. ಇನ್ನುಳಿದ 80 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳಲಾಗಿದೆ. ಈ ಪೈಕಿ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತೊಮ್ಮೆ ಪರಿಶೀಲಿಸಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ನೀರು ನಿಲ್ಲುವಂತಹ ಪ್ರದೇಶದಲ್ಲಿ ಪಂಪ್‍ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಇನ್ನು ಅರಣ್ಯ ವಿಭಾಗದಿಂದ ಮರಗಳು ಬಿದ್ದಿರುವ ಸ್ಥಳಕ್ಕೆ ತ್ವರಿತವಾಗಿ ಹೋಗಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ಎಲ್ಲಿಯೂ ಯಾವುದೇ ರೀತಿಯ ತೊಂದರೆಗಳಾಗದಂತೆ ನಾಗರಿಕರಿಂದ ಬಂದಂತಹ ದೂರುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಬೇಕು ಎಂದು ತುμÁರ್ ಗಿರಿನಾಥ್ ಹೇಳಿದರು.

ಆಯಾ ವಲಯ ಹಿರಿಯ ಅಧಿಕಾರಿಗಳು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಈ ಸಂಬಂಧ ರಾಜಕಾಲುವೆ ಕಾಮಗಾರಿ, ಪ್ರವಾಹ ಪೀಡಿತ ಪ್ರದೇಶಗಳು, ಕೆಳಸೇತುವೆ ಹಾಗೂ ಮೇಲುಸೇತುವೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ಥಳದಲ್ಲಿ ಏನಾದರು ಸಮಸ್ಯೆ ಇದ್ದರೆ, ಕೂಡಲೆ ಅದನ್ನು ಬಗೆಹರಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಎಲ್ಲ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಉಪ ಅರಣ್ಯ ಸಂರಕ್ಷಣಾಧಿಕಾರಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ನಗರದಲ್ಲಿ ಮೆಟ್ರೋ, ಜಲಮಂಡಳಿ, ಬೆಸ್ಕಾಂ, ಕೆಪಿಟಿಸಿಎಲ್, ಗೇಲ್ ಸೇರಿದಂತೆ ಇನ್ನಿತರೆ ಇಲಾಖೆಗಳು ಕೈಗೆತ್ತಿಕೊಳ್ಳುವ ಕಾಮಗಾರಿಗಳಿಂದ ರಸ್ತೆ ಬದಿಯ ಚರಂಡಿಗಳು, ರಸ್ತೆ ಮೇಲ್ಮೈ ಹಾಳಾಗಿದೆ. ಮಳೆಗಾಲದಲ್ಲಿ ರಸ್ತೆಗಳ ಮೂಲಕ ನೀರು ನುಗ್ಗುವುದು, ನೀರು ನಿಲ್ಲುವ ಸಮಸ್ಯೆ ಸೃಷ್ಟಿಯಾಗಿದೆ. ಆದುದರಿಂದ ಶೀಘ್ರವಾಗಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಸಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುವುದು.

ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ 

share
Next Story
X