Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ...

ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

15 Jun 2023 10:13 AM IST
share
ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು, ಜೂ. 15: ಇಂಜಿನಿಯರಿಂಗ್, ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಫಲಿತಾಂಶ ಹೊರಬಿದ್ದಿದ್ದು, ಎಲ್ಲ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರಿನ ವಿಜ್ಞೇಶ್ ನಟರಾಜ್ ಕುಮಾರ್ ಶೇ.97.889ರಷ್ಟು ಅಂಕಗಳಿಸಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅದೇ ರೀತಿ, ಟಾಪ್ 10 ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ಅರುಣ್ ಕೃಷ್ಣಸ್ವಾಮಿ ಶೇ.97.5ರಷ್ಟು ಅಂಕಗಳಿಸಿ ಎರಡನೆ ಸ್ಥಾನ ಪಡೆದುಕೊಂಡಿದ್ದಾರೆ.

ಗುರುವಾರ ನಗರದ ಮಲ್ಲೇಶ್ವರಂನ ಪರೀಕ್ಷಾ ಪ್ರಾಧಿಕಾರ ಕೇಂದ್ರ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಬಿಡುಗಡೆ ಮಾಡಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಈ ಪರೀಕ್ಷೆಯನ್ನು ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‍ಸಿ ನಸಿರ್ಂಗ್ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕಾಗಿ, ಮೇ 20ರಿಂದ ಮೇ 22ರ ವರೆಗೆ ನಡೆಸಿದ್ದು, ಈ ಪರೀಕ್ಷೆಗೆ 2,44,345 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ತಿಳಿಸಿದರು.

ಈ ಪೈಕಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿದ ನಂತರ, ಇಂಜಿನಿಯರಿಂಗ್ ಕೋರ್ಸಿಗೆ 2,03,381, ಕೃಷಿ ವಿಜ್ಞಾನಕ್ಕೆ 1,64,187, ಮಹಾಸಂಗೋಪನೆಗೆ 1,66,756, ಯೋಗ ಮತ್ತು ನ್ಯಾಚುರೋಪತಿಗೆ 1,66,746, ‘ಬಿ’, ಫಾರ್ಮ ಕೋರ್ಸಿಗೆ 2,06,191 ಹಾಗೂ ‘ಡಿ’ ಫಾರ್ಮ್ ಕೋರ್ಸಿಗೆ 2,06,340 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ ಎಂದು ಸಚಿವ ಎಂ.ಸಿ.ಸುಧಾಕರ್ ವಿವರಿಸಿದರು. 

ಪ್ರಸಕ್ತ ಸಾಲಿನಲ್ಲಿ ಐಎನ್‍ಸಿ, ಅನುಸಾರ ಹಾಗು ಸರಕಾರದ ಆದೇಶದ ಅನ್ವಯ ಬಿ.ಎಸ್.ಸಿ (ನಸಿರ್ಂಗ್) ಕೋರ್ಸಿಗೂ ಸಹ ಸಿಇಟಿ ನಡೆಸಲಾಗಿದ್ದು, ಒಟ್ಟು 1,66,808 ಅಭ್ಯರ್ಥಿಗಳು ಅರ್ಹತೆಯನ್ನು ಪಡೆದಿದ್ದಾರೆ ಎಂದು ಸಚಿವ ಎಂ.ಸಿ.ಸುಧಾಕರ್ ವಿವರಿಸಿದರು.

ಬಾಲಕಿಯರು ಮೇಲುಗೈ: ಬಿಎಸ್ಸಿ ಕೃಷಿ ವಿಜ್ಞಾನ ವಿಭಾಗದಲ್ಲಿ 71,796 ಬಾಲಕರು ಅರ್ಹತೆ ಪಡೆದರೆ, 94 ಸಾವಿರಕ್ಕೂ ಅಧಿಕ ಬಾಲಕಿಯರು ಅರ್ಹತೆ ಪಡೆದುಕೊಂಡಿದ್ದಾರೆ. ‘ಬಿ’ ಫಾರ್ಮಾದಲ್ಲೂ 97 ಸಾವಿರ ಬಾಲಕರಿದ್ದರೆ, ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿನಿಯರು ಅರ್ಹರಾಗಿದ್ದಾರೆ. ‘ಡಿ’ ಫಾರ್ಮಾದಲ್ಲೂ ಒಂದು ಲಕ್ಷ ಬಾಲಕಿಯರು, ಬಿಎಸ್ಸಿ ನಸಿರ್ಂಗ್ ನಲ್ಲೂ 94 ಸಾವಿರಕ್ಕೂ ಅಧಿಕ ಬಾಲಕಿಯರು ಅರ್ಹರಾಗಿದ್ದಾರೆ ಎಂದು ಸಚಿವ ಎಂ.ಸಿ.ಸುಧಾಕರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಪ್ರಾಧಿಕಾರದ ಕಾರ್ಯನಿರ್ವಾಹಕಿ ಎಸ್.ರಮ್ಯಾ ಸೇರಿದಂತೆ ಪ್ರಮುಖರಿದ್ದರು.

ಇಂಜಿನಿಯರಿಂಗ್ ಟಾಪರ್ಸ್: ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ನಟರಾಜ್ ಕುಮಾರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅರುಣ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ತೃತೀಯ ಸ್ಥಾನವನ್ನು ಸಮೃದ್ಧ್ ಶೆಟ್ಟಿ(ಶೇ.97.167) ಹಾಗೂ ಸುಮೇಧ್ ಎಸ್.ಎಸ್.(ಶೇ.97.056)ಗೆ 4ನೆ ಸ್ಥಾನ ಪಡೆದುಕೊಂಡಿದ್ದರೆ, ಮಾಧವ ಸೂರ್ಯ ತಡೆಪಲ್ಲಿ (ಶೇ.96.834) ಅವರು 5ನೆ ಸ್ಥಾನ ಪಡೆದಿದ್ದಾರೆ.

ಯುಜಿ ನೀಟ್ ಫಲಿತಾಂಶ ಬಂದ ನಂತರ ಈ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಹಾಗೂ ಭಾರತೀಯ ವೈದ್ಯ ಪದ್ಧತಿ ಹಾಗೂ ಹೋಮಿಯೋಪತಿ ಕೋರ್ಸ್‍ಗಳ ಪ್ರವೇಶಕ್ಕೆ ಪರಿಗಣಿಸಲಾಗುವುದು. ಹಾಗೆಯೇ, ಎನ್‍ಎಟಿಎ-2023 ಅಂಕಗಳ ಆಧಾರದ ಮೇಲೆ ಆರ್ಕಿಟೆಕ್ಚರ್ ಕೋರ್ಸ್‍ಗಳ ಪ್ರವೇಶಕ್ಕೆ ರ್ಯಾಂಕ್ ಅನ್ನು ಪ್ರಕಟಿಸಲಾಗುವುದು ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಶೀಘ್ರವೇ ಕೌನ್ಸಿಲಿಂಗ್: ‘ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2023ರ ಮೊದಲ ಸುತ್ತಿನ ಕೌನ್ಸಿಲಿಂಗ್ ದಿನಾಂಕಗಳನ್ನು ಶೀಘ್ರವಾಗಿ ಪ್ರಕಟಿಸಲಾಗುವುದು. ಇನ್ನೂ, ರ್ಯಾಂಕ್ ನೀಡಿದ ಮಾತ್ರಕ್ಕೆ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಅರ್ಹತೆ ಬರುವುದಿಲ್ಲ. ದಾಖಲಾತಿ ಪರಿಶೀಲನೆ ನಂತರ ಅರ್ಹತೆ ಪರಿಗಣಿಸಲಾಗುವುದು ಎಂದು ಡಾ.ಎಂ.ಸಿ.ಸುಧಾಕರ್ ಮಾಹಿತಿ ನೀಡಿದರು.

ವಿಭಾಗವಾರು ಮೊದಲ ರ್ಯಾಂಕ್!

-ಭೈರೇಶ್ ಎಸ್.ಎಚ್.- ಬಿಎಸ್ಸಿ ಕೃಷಿ 

-ಮಾಳವಿಕಾ ಕಫೂರ್-ಬಿ.ವಿ.ಎಸ್ಸಿ ಪಶುಸಂಗೋಪನೆ ಹಾಗೂ ಬಿಎಸ್ಸಿ ನಸಿರ್ಂಗ್

-ಪ್ರತೀಕ್ಷಾ ಆರ್.-ಬಿ.ಫಾರ್ಮಾ ಹಾಗೂ ಡಿ.ಫಾರ್ಮಾ

share
Next Story
X