ತೇಜಸ್ವಿ ಕಥೆಯ 'ಡೇರ್ ಡೆವಿಲ್ ಮುಸ್ತಫಾ' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಸಿದ್ಧ ಲೇಖಕ, ಚಿಂತಕ ಪೂರ್ಣಚಂದ್ರ ತೇಜಸ್ವಿ ಅವರ ಕತೆ ಆಧಾರಿತ "ಡೇರ್ ಡೆವಿಲ್ ಮುಸ್ತಫಾ" ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ತೇಜಸ್ವಿಯವರ ಸಾಹಿತ್ಯ ಕೃತಿ ಡೇರ್ ಡೆವಿಲ್ ಮುಸ್ತಫಾ ಎಂಬ ಸಣ್ಣ ಕಥೆಯನ್ನು ಆಧರಿಸಿ ನಿರ್ದೇಶಕ ಶಶಾಂಕ್ ಸೋಗಾಲ ''ಡೇರ್ ಡೆವಿಲ್ ಮುಸ್ತಫಾ" ಚಿತ್ರವನ್ನು ಮಾಡಿದ್ದಾರೆ. ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರದ ತಂಡವು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಮಾಡಿತ್ತು.
ಅಲ್ಲದೇ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಚಿತ್ರ ತಂಡವು, 'ಕೋಮು ಸಾಮರಸ್ಯ ಹಾಗೂ ಭಾವೈಕ್ಯತೆಯ ಸಂದೇಶ ಸಾರುವ ಈ ಸಿನಿಮಾ ಈಗಾಗಲೇ ಬಿಡುಗಡೆಗೊಂಡು ಅಪಾರ ಜನರ ಮನ್ನಣೆಗಳಿಸುತ್ತಿದೆ. ರಾಜ್ಯವು ಸರ್ವಜನಾಂಗದ ಶಾಂತಿಯ ತೋಟವಾಗಲು ಇಂತಹ ಸಿನೆಮಾಗಳು ಜನರಿಗೆ ಹೆಚ್ಚುಹೆಚ್ಚು ತಲುಪಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಇನ್ನಷ್ಟು ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಸಿನೆಮಾ ನೋಡಲು ಅನುಕೂಲವಾಗುವಂತೆ ಈ ಸಿನೆಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂದು' ಎಂದು ಪತ್ರದಲ್ಲಿ ತಿಳಿಸಿದೆ.
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ಬೆಂಬಲ ಇರಲಿ: ಸಿಎಂ ಸಿದ್ದರಾಮಯ್ಯ
''ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ "ಡೇರ್ ಡೆವಿಲ್ ಮುಸ್ತಫಾ" ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ. ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ'' ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ "ಡೇರ್ ಡೆವಿಲ್ ಮುಸ್ತಫಾ" ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ.
— Siddaramaiah (@siddaramaiah) June 15, 2023
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ…







