ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಕಳ್ಳತನ: ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನಲ್ಲಿರುವ ಮನೆಯಲ್ಲಿ ಆಗಿರುವ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ.
ಕಳೆದ ವಾರ ಜುಹುನಲ್ಲಿರುವ ಶಿಲ್ಪಾ ಶೆಟ್ಟಿ ಅವರ ನಿವಾಸದಿಂದ ಕೆಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಜುಹು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತನಿಖಾ ತಂಡವು ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Next Story





