Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆ್ಯಂಟಿ ಕಮ್ಯುನಲ್ ವಿಂಗ್‌ ಗೆ ಸಿಸಿಬಿಯ...

ಆ್ಯಂಟಿ ಕಮ್ಯುನಲ್ ವಿಂಗ್‌ ಗೆ ಸಿಸಿಬಿಯ ಎಸಿಪಿ ಉಸ್ತುವಾರಿ; ಮಂಗಳೂರು ಕಮಿಷನರ್ ಆದೇಶ

15 Jun 2023 3:50 PM IST
share
ಆ್ಯಂಟಿ ಕಮ್ಯುನಲ್ ವಿಂಗ್‌ ಗೆ ಸಿಸಿಬಿಯ ಎಸಿಪಿ ಉಸ್ತುವಾರಿ; ಮಂಗಳೂರು ಕಮಿಷನರ್ ಆದೇಶ

ಮಂಗಳೂರು, ಜೂ.15: ಮಂಗಳೂರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರನ್ನು ಮತ್ತು ಅನೈತಿಕ ಪೊಲೀಸ್‌ ಗಿರಿ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ರಚನೆಗೆ ತಯಾರಿ ನಡೆದಿದ್ದು, ನಗರ ಅಪರಾಧ ವಿಭಾಗ(ಸಿಸಿಬಿ) ಸಹಾಯಕ ಪೊಲೀಸ್ ಆಯುಕ್ತರಿಗೆ ಇದರ ಉಸ್ತುವಾರಿಯನ್ನು ನೀಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಆದೇಶ ನೀಡಿದ್ದಾರೆ.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ಹಾಗೂ ಯಾವುದೇ ರೀತಿಯ ಕೋಮು ಗಲಭೆಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಭಾಯಿಸುವುದು ಆ್ಯಂಟಿ ಕಮ್ಯುನಲ್ ವಿಂಗ್‌ನ ಉದ್ದೇಶವಾಗಿದೆ ಎಂದು ಕಮೀಷನರ್ ಆದೇಶದಲ್ಲಿ ತಿಳಿಸಿದ್ದಾರೆ.

ಜೂ.6ರಂದು ಮಂಗಳೂರಿನಲ್ಲಿ ನಡೆದ ನಗರದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ ಹೆಚ್ಚು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಆ್ಯಂಟಿ ಕಮ್ಯುನಲ್ ವಿಂಗ್ ರಚನೆಯ ಬಗ್ಗೆ ಪ್ರಸ್ತಾಪಿಸಿದ್ದರು.

ಮಂಗಳೂರು ನಗರವು ಪುರಾತನ ಮತ್ತು ಪಾರಂಪರಿಕ ನಗರವಾಗಿದ್ದು, ಇಲ್ಲಿ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿರುವುದರಿಂದ ವಿದೇಶಿಯರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ. ನಗರ ಪ್ರದೇಶದಲ್ಲಿ ಅನೇಕ ವಿದ್ಯಾಸಂಸ್ಥೆಗಳದ್ದು ರಾಜ್ಯ, ಅಂತರ್‌ ರಾಜ್ಯ ಮತ್ತು ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಮಂಗಳೂರು ನಗರ ವ್ಯಾಪ್ತಿಯು ಕೋಮು ಸೌಹಾರ್ದತೆ ವಿಚಾರದಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸಣ್ಣ ಪುಟ್ಟ ಮತೀಯ ಘಟನೆಗಳು ವಿಕೋಪಕ್ಕೆ ಹೋಗಿರುವ ಸನ್ನಿವೇಶಗಳು ಈ ಹಿಂದೆ ನಡೆದಿದೆ. ನಗರದಲ್ಲಿ ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ ಹಾಗೂ ಕಾನೂನು ಸುವ್ಯವಸ್ಥೆಗೆ ತೊಂದರೆಯಾದ ಸಮಯದಲ್ಲಿ ಅಶಾಂತಿಯ ವಾತಾವರಣ ಉಂಟಾಗಿರುತ್ತದೆ.

ಆ್ಯಂಟಿ ಕಮ್ಯುನಲ್ ವಿಂಗ್‌ನ ಕೆಲಸ ಏನು?

*ನಗರದಲ್ಲಿ ನಡೆಯಬಹುದಾದ ಅನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು.

*ನಗರದಲ್ಲಿ ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು ಸೇರಿದಂತೆ ಅನೈತಿಕ ಪೊಲೀಸ್‌ಗಿರಿ , ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋವಧೆ ಮುಂತಾದ ಪ್ರಕರಣಗಳನ್ನು ಪರಿಶೀಲಿಸಿ ಅವುಗಳಲ್ಲಿ ಆರೋಪಿಗಳಾಗಿ ಗುರುತಿಸಿಕೊಂಡವರ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸಿ ಅವರ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದರ ಬಗ್ಗೆ ಕರ್ತವ್ಯ ನಿರ್ವಹಿಸುವುದು.

*ಕೋಮು ವಿಚಾರಕ್ಕೆ ಸಂಬಂಧಿಸಿ ಕಾರ್ಯಾಚರಿಸುತ್ತಿರುವ ಎಲ್ಲ ಸಂಘಟನೆಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ,ನಿಗಾವಹಿಸುವುದು.

 ಎಸಿಡಬ್ಲ್ಯುನಲ್ಲಿ ಯಾರೆಲ್ಲಾ ಇರುತ್ತಾರೆ ?

ನಗರದ ಅಪರಾಧ ವಿಭಾಗದ (ಸಿಸಿಐ) ಸಹಾಯಕ ಪೊಲೀಸ್ ಆಯುಕ್ತರು ಈ ತಂಡದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಲಿರುವ ಆ್ಯಂಟಿ ಕಮ್ಯುನಲ್ ವಿಂಗ್‌ನಲ್ಲಿ ಮಂಗಳೂರು ನಗರದ ವಿಶೇಷ ಘಟಕದ(ಸಿಎಸ್‌ಬಿ) ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಸದಸ್ಯರಾಗಿರುತ್ತಾರೆ. ಇವರು ನಗರದಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಕೋಮು ಸೌಹಾರ್ಧಕ್ಕೆ ಧಕ್ಕೆ ಉಂಟು ಮಾಡುವ ಪ್ರಕರಣಗಳ ಕುರಿತು ಕಾಲಕಾಲಕ್ಕೆ ವಿಶ್ಲೇಷಣೆ ಮಾಡಿ ಆರೋಪಿಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಗಮನಹರಿಸಲಿದ್ದಾರೆ.

share
Next Story
X