ಸಾರಿಗೆ ಬಸ್‍ಗಳಲ್ಲಿ ಮಹಿಳೆಯರ ಸಂಖ್ಯೆ ಏರಿಕೆ; ‘ಶಕ್ತಿ’ ಯೋಜನೆಯಡಿ ಉಚಿತವಾಗಿ 4ನೇ ದಿನ ಪ್ರಯಾಣಿಸಿದ ಮಹಿಳೆಯರೆಷ್ಟು?

ಬೆಂಗಳೂರು, ಜೂ. 13: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದ್ದು, ನಾಲ್ಕನೆ ದಿನ ಒಟ್ಟು 1.12 ಕೋಟಿ ಮಂದಿ ಪ್ರಯಾಣಿಸಿದ್ದು, ಆಪೈಕಿ 51.17ಲಕ್ಷ ಮಂದಿ ಮಹಿಳೆಯರು ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸಿದ್ದಾರೆ.
ಸಾರಿಗೆ ಇಲಾಖೆ ಈ ಸಂಬಂಧ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದು, ಜೂ.14ರ ಮಧ್ಯರಾತ್ರಿ 12ಗಂಟೆಯ ವರೆಗೆ ಒಟ್ಟು 51,17,174 ಮಂದಿ ಮಹಿಳೆಯರು ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸಿದ್ದು, ಶೂನ್ಯ ಟಿಕೆಟ್ ಪ್ರಯಾಣದ ಮೊತ್ತ ಒಟ್ಟು 11,51,08,324 ರೂ.(11.51ಕೋಟಿ ರೂ.)ಗಳು ಎಂದು ತಿಳಿಸಲಾಗಿದೆ.
ಕೆಎಸ್ಸಾರ್ಟಿಸಿ-14ಲಕ್ಷ ಮಂದಿ ಒಟ್ಟು 4.12 ಕೋಟಿ ರೂ., ಬಿಎಂಟಿಸಿ-16.85 ಲಕ್ಷ ಮಂದಿ ಒಟ್ಟು 2.19 ಕೋಟಿ ರೂ., ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ-12.71ಲಕ್ಷ ಮಂದಿ ಒಟ್ಟು 3.02 ಕೋಟಿ ರೂ. ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ- 6.60ಲಕ್ಷ ಮಂದಿ ಮಹಿಳೆಯರು ಪ್ರಯಾಣಿಸಿದ್ದು, ಒಟ್ಟು 2.16 ಕೋಟಿ ರೂ.ಗಳು ಶೂನ್ಯ ಟಿಕೆಟ್ ಮೌಲ್ಯವಾಗಿದೆ ಎಂದು ತಿಳಿಸಿದೆ.
ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ವಿದ್ಯಾರ್ಥಿನಿಯರು ಸೇರಿದಂತೆ ಮಹಿಳೆಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮನೆಯಿಂದ ಹೊರಗೆ ಹೋಗಬೇಕೆಂದರೆ ಮಹಿಳೆಯರು ದ್ವಿಚಕ್ರ ವಾಹನವನ್ನು ಬಿಟ್ಟು ಕೈಯಲ್ಲಿ ಆಧಾರ್ ಕಾರ್ಡ್ ಹಿಡಿದು ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸುವ ದೃಶ್ಯ ಸಾಮಾನ್ಯವಾಗಿತ್ತು. ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.






.jpg)
.jpg)
.jpg)

