ಜೂ.16: ಮೀನುಗಾರಿಕಾ ಸಚಿವರ ದ.ಕ.ಜಿಲ್ಲಾ ಪ್ರವಾಸ

ಮಂಗಳೂರು, ಜೂ.15:ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಜೂ.16ರಂದು ದ.ಕ.ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 9ಕ್ಕೆ ಇಲಾಖೆಯ ಪ್ರಗತಿ ಪರಿಶೀಲನೆ ಮಾಡುವರು. 10ಕ್ಕೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು.11:30ಕ್ಕೆ ಮೀನುಗಾರಿಕಾ ಅಭಿವೃದ್ಧಿ ನಿಗಮದ ಕಚೇರಿಗೆ, 12ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 1ಕ್ಕೆ ಉಡುಪಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.
Next Story





