ಎಲ್.ಟಿ. ಮುಹಮ್ಮದ್ ಬಾವು ನಿಧನ

ಪುತ್ತೂರು: ಚಿಕ್ಕಪುತ್ತೂರು ನಿವಾಸಿ ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಅವರ ಸಹೋದರ ವಿದೇಶದಲ್ಲಿ ಉದ್ಯೋಗದಲ್ಲಿರುವ ಎಲ್.ಟಿ. ಮುಹಮ್ಮದ್ ಬಾವು(52) ಹೃದಯಾಘಾತ ದಿಂದ ಗುರುವಾರ ಸೌದಿ ಅರೇಬಿಯಾದ ರಿಯಾದ್ನಲ್ಲಿ ನಿಧನರಾದರು.
ಅವರು ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ನಲ್ಲಿ ಉದ್ಯೋಗದಲ್ಲಿದ್ದರು. ಬುಧವಾರ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story