ಜೂ.16ರಂದು ಉಡುಪಿಗೆ ಮೀನುಗಾರಿಕಾ ಸಚಿವ ಮಂಕಾಳೆ ವೈದ್ಯ ಭೇಟಿ

ಉಡುಪಿ, ಜೂ.15: ರಾಜ್ಯದ ನೂತನ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಜೂ.16ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶುಕ್ರವಾರ ಅಪರಾಹ್ನ 2:30ಕ್ಕೆ ಸಚಿವರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸುವ ಮಂಕಾಳಿ ವೈದ್ಯರು 3:00ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಬ್ರಹ್ಮಗಿರಿ ಯಲ್ಲಿರುವ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡುವ ಸಚಿವರು 5:30ಕ್ಕೆ ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಅಭಿನಂದನಾ ಸಮಾರಂಭ ದಲ್ಲಿ ಭಾಗವಹಿಸಿದ ಬಳಿಕ ಮುರುಡೇಶ್ವರಕ್ಕೆ ತೆರಳುವರು.
Next Story





