ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

ಕಾಪು : ಕಡಲ್ಕೊರೆತ ಪ್ರದೇಶವಾದ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ, ಪ್ರತಿ ವರ್ಷದಂತೆ ಈ ಭಾರಿಯೂ ಕಡಲ್ಕೊರತ ಕಾಣಿಸಿಕೊಂಡಿದೆ. ಈ ಬಗ್ಗೆ ಶುಕ್ರವಾರ ಸಚಿವರು ಭೇಟಿ ನೀಡಲಿದ್ದು, ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಚಿವರ ಗಮನಕ್ಕೆ ತರಲಾಗುವುದು ಎಂದರು.
ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಆಸೀಫ್ ಮೂಳೂರು, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರ ರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.