ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ

ಮಂಗಳೂರು, ಜೂ.16: ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಮತ್ತು ದ.ಕ.ಜಿಪಂ ಸಿಇಒ ಡಾ. ಕುಮಾರ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ತೆರವಾದ ಜಿಲ್ಲಾಧಿಕಾರಿ ಸ್ಥಾನಕ್ಕೆ ಮುಲ್ಲೈ ಮುಹಿಲನ್ ಅವರನ್ನು ನೇಮಕಗೊಳಿಸಿದ್ದು, ಸಿಇಒ ಹುದ್ದೆಗೆ ಯಾರನ್ನೂ ನಿಯುಕ್ತಿಗೊಳಿಸಿಲ್ಲ.
ಮೂಲತಃ ತಮಿಳ್ನಾಡಿನ ಮುಲ್ಲೈ ಮುಹಿಲನ್ 2013ರ ಐಎಎಸ್ ಬ್ಯಾಚ್‌ನವರಾಗಿದ್ದಾರೆ. ದಿಂಡಿಗಲ್ ಅಣ್ಣಾ ವಿಶ್ವವಿದ್ಯಾನಿಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಪಡೆದಿದ್ದಾರೆ.
ಸೆಂಟರ್ ಫಾರ್ ಸ್ಮಾರ್ಟ್ ಗೌವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮುಹಿಲನ್ ಅದಕ್ಕೂ ಮುನ್ನ ಬಾಗಲಕೋಟೆ ಜಮಖಂಡಿ ಉಪವಿಭಾಗ ಅಧಿಕಾರಿ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಇದರ ಮುಖ್ಯ ಕಾರ್ಯನಿರ್ವಹಣಾಕಾರಿ, ಉತ್ತರ ಕನ್ನಡ ಜಿಲ್ಲೆಯ ಉಪ ವಿಭಾಗ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಡಾ.ಕುಮಾರ್ ಮಂಡ್ಯ ಡಿಸಿ: ದ.ಕ. ಅಪರ ಜಿಲ್ಲಾಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದ ಡಾ. ಕುಮಾರ್ 2021ರ ಫೆ.19ರಂದು ದ.ಕ.ಜಿಪಂ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಮುಂಭಡ್ತಿ ಹೊಂದಿ ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರವಿಕುಮಾರ್‌ಗೆ ಯಾವುದೇ ಹುದ್ದೆ ತೋರಿಸಿಲ್ಲ.
ರಾಜ್ಯ ಸರ್ಕಾರ ಇಂದು (ಜೂ. 16) 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.