ಮಂಗಳೂರು: ಜೂ.19ರಂದು ಸ್ಪೀಕರ್ ಯು.ಟಿ ಖಾದರ್‌ಗೆ ಸನ್ಮಾನ

ಮಂಗಳೂರು: ತುಳು ಪರಿಷತ್ ಮಂಗಳೂರು ವತಿಯಿಂದ ನೂತನ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮವು ಜೂ.19ರಂದು ಬೆಳಗ್ಗೆ 10 ಗಂಟೆಗೆ ನಗರದ ಪುರಭವನದಲ್ಲಿ ನಡೆಯಲಿದೆ ಎಂದು ತುಳು ಪರಿಷತ್ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಟ್ಟೆ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನಾಗರಿಕ ಸನ್ಮಾನ ನಡೆಯಲಿದೆ. ಸನ್ಮಾನ ಕಾರ್ಯಕ್ರಮಕ್ಕಿಂತ ಮೊದಲು ವಿವಿಧ ಕಾಲೇಜುಗಳ ಆಯ್ದ ವಿದ್ಯಾರ್ಥಿಗಳೊಂದಿಗೆ ಸ್ಪೀಕರ್ ಯು.ಟಿ ಖಾದರ್ ಅವರು ಸಂವಾದ ನಡೆಸಲಿದ್ದಾರೆ. ವಿಧಾನಸಭೆಯ ಕಾರ್ಯಕಲಾಪಗಳು, ಪ್ರಜಾತಾಂತ್ರಿಕ ವ್ಯವಸ್ಥೆ, ಶಾಸಕಾಂಗದ ಕಾರ್ಯ ನಿರ್ವಹಣೆ, ಸ್ಪೀಕರ್ ಹುದ್ದೆಯ ಪ್ರಾಮುಖ್ಯತೆ, ಸಂಸದೀಯ ಕಾರ್ಯಕಲಾಪಗಳ ಬಗ್ಗೆ ಸಂವಾದ ನಡೆಸಲಿದ್ದಾರೆ.
ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ರಮಾನಾಥ ರೈ, ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ತುಳು ಪರಿಷತ್‌ನ ಗೌರವ ಅಧ್ಯಕ್ಷ ಸ್ವರ್ಣ ಸುಂದರ್, ಅಧ್ಯಕ್ಷ ಡಾ.ಪ್ರಭಾಕರ್ ನೀರ್‌ಮಾರ್ಗ, ಪ್ರಧಾನ ಕಾರ್ಯದರ್ಶಿ ಬೆನೆಟ್ ಅಮ್ಮನ್ನ, ಕೋಶಾಧಿಕಾರಿ ಶುಭೋದಯ ಆಳ್ವ ಉಪಸ್ಥಿತರಿದ್ದರು.