10 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜೂ.16: ರಾಜ್ಯ ಸರಕಾರವು 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಕಾರ್ಯಕಾರಿ ನಿರ್ದೇಶಕರಾಗಿದ್ದ ಮುಲೈ ಮುಹಿಲಾನ್ ಎಂ.ಪಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ಫಿಸ್ಕಲ್ ಪಾಲಿಸಿ ಇನ್ಸ್‍ಟಿಟ್ಯೂಟ್‍ನ ಹೆಚ್ಚುವರಿ ನಿರ್ದೇಶಕಿ ಪಲ್ಲವಿ ಆಕೃತಿ ಅವರನ್ನು ಸಕಾಲ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕಿಯಾಗಿ, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ.ವೆಂಕಟೇಶ್ ಎಂ.ವಿ. ಅವರನ್ನು ಪಶುಸಂಗೋಪನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಯೋಜನೆ) ರವೀಂದ್ರ ಪಿ.ಎನ್. ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ, ಬೆಂಗಳೂರು ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಕೆ. ಅವರನ್ನು ತುಮಕೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಕಾಲ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕಿ ಜಾನಕಿ ಕೆ.ಎಂ. ಅವರನ್ನು ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ, ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಯೋಗೇಶ್ ಎ.ಎಂ. ಅವರನ್ನು ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿ ನವೀನ್ ಕುಮಾರ್ ರಾಜು ಎಸ್. ಅವರನ್ನು ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.







