Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯದ ಮೀನುಗಾರರಿಗೆ ಮನೆ ಒದಗಿಸಲು...

ರಾಜ್ಯದ ಮೀನುಗಾರರಿಗೆ ಮನೆ ಒದಗಿಸಲು ಪ್ರಯತ್ನ: ಸಚಿವ ಮಂಕಾಳ ವೈದ್ಯ

16 Jun 2023 8:00 PM IST
share
ರಾಜ್ಯದ ಮೀನುಗಾರರಿಗೆ ಮನೆ ಒದಗಿಸಲು ಪ್ರಯತ್ನ: ಸಚಿವ ಮಂಕಾಳ ವೈದ್ಯ

ಉಡುಪಿ, ಜೂ.16: ಈ ಹಿಂದೆ 2017-18ರಲ್ಲಿ ಮೀನುಗಾರರಿಗೆ ಮಂಜೂರು ಮಾಡಿರುವ ಮನೆಗಳು ಇನ್ನೂ ಕೂಡ ಪೂರ್ತಿಯಾಗಿ ಮುಗಿದಿಲ್ಲ. ಅದರ ನಂತರ ಸರಕಾರ ಯಾವುದೇ ಮನೆಯನ್ನು ಮೀನುಗಾರರಿಗೆ ಕೊಟ್ಟಿಲ್ಲ. ಆದುದರಿಂದ ಈ ಬಾರಿ ಇಡೀ ರಾಜ್ಯದಲ್ಲಿ ಅಗತ್ಯ ಇರುವ ಮೀನುಗಾರರಿಗೆ ಮನೆ ಕೊಡುವ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲೆಯ ಮೀನುಗಾರರು ಮತ್ತು ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಆಗುತ್ತಿರುವ ಸಮಸ್ಯೆಗಳ ಕುರಿತ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತಿದ್ದರು.

ಮಳೆಗಾಲ ಆರಂಭವಾಗಿರುವುದರಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮುದ್ರ ಕೊರೆತೆ ಸಮಸ್ಯೆಗೆ ಕೂಡಲೇ ಸ್ಪಂದಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 40 ಕಿ.ಮೀ. ವ್ಯಾಪ್ತಿಯಲ್ಲಿ ಈ ಬಾರಿ ಕಡಲ್ಕೊರೆತ ಕಂಡುಬಂದಿದೆ. ಜಿಲ್ಲಾಡಳಿತ ಕೂಡ ಎಲ್ಲ ರೀತಿಯಲ್ಲಿ ಸಜ್ಜಾಗಿದೆ. ಅದೇ ರೀತಿ ಕಡಲ್ಕೊರೆತಕ್ಕೆ ತಡೆಗೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಆಗದಂತೆ ಕ್ರಮ ವಹಿಸಲಾಗುತ್ತದೆ ಎಂದರು.

ಕಡಲ್ಕೊರೆತ ತಡೆಗೆ ಕಲ್ಲು ಹಾಕಿರುವ ಗುತ್ತಿಗೆದಾರರ ಹಣ ಬಾಕಿ ಇರುವುದರಿಂದ ಈ ವರ್ಷ ಯಾರು ಕೂಡ ಮುಂದೆ ಬರುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಿ ಕೂಡ ಕಾಮಗಾರಿ ನಿಂತಿಲ್ಲ. ಎಲ್ಲ ಕಡೆ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಮೃತ ಮೀನುಗಾರ ಕುಟುಂಬಗಳಿಗೆ ನೀಡುವ ಸಂಕಷ್ಟ ಪರಿಹಾರ ನಿಧಿಯನ್ನು ಕಳೆದ ಒಂದು ವರ್ಷಗಳಿಂದ ಬಾಕಿ ಇರಿಸ ಲಾಗಿದ್ದು, ಅದನ್ನು ಕೂಡಲೇ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಉಳ್ಳಾಲ ಮಾದರಿಯ ಕಾಮಗಾರಿ

ಉಳ್ಳಾಲ ಮಾದರಿಯ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಾಮಗಾರಿಯನ್ನು ಉಡುಪಿ ಜಿಲ್ಲೆಯ ಮರವಂತೆ ನಾಗಬನ ಹಾಗೂ ಪಡುಬಿದ್ರಿಯ ನಡಿಪಟ್ಣ ಸೇರಿದಂತೆ ನಾಲ್ಕು ಕಡೆ ನಡೆಸಲು ಈಗಾಗಲೇ ಅಂದಾಜು ಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮೀನುಗಾರರಿಗೆ ಅವಶ್ಯಕತೆ ಇದ್ದರೆ ಹಾಗೂ ಪ್ರಯೋಜನ ಆಗುವುದಾದರೆ  ಸೀ ಆ್ಯಂಬುಲೆನ್ಸ್ ನಿಯೋಜಿಸುವ ಬಗ್ಗೆ ಯೋಚನೆ ಮಾಡಲಾಗುವುದು. ಗಂಗೊಳ್ಳಿಯಲ್ಲಿ ಕುಸಿದ ಜೆಟ್ಟಿ ಕಾಮಗಾರಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡ ಲಾಗಿದೆ. ಕೂಡಲೇ ಸರಿಪಡಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಮರವಂತೆ ಬ್ರೇಕ್ ವಾಟರ್ ಎರಡನೇ ಕಾಮಗಾರಿಗೆ ಸಂಬಂಧಿಸಿದ ಸಿಆರ್‌ಝೆಡ್ ಕ್ಲಿಯರೆನ್ಸ್ ಮಾಡಲು ನಿರ್ದೇಶನ ನೀಡಲಾಗಿದೆ. ಕೂಡಲೇ ಕ್ಲಿಯರೆನ್ಸ್ ಮಾಡಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅದಕ್ಕೆ ಟೆಂಡರ್ ಕೂಡ ಆಗಿದೆ. ಯಾವುದೇ ಕಾಮಗಾರಿ ವಿಳಂಬ ಆಗಲು ನಾವು ಬಿಡುವುದಿಲ್ಲ. ಮೀನುಗಾರಿಗೆ ಅನುಕೂಲ ವಾಗುವ ಎಲ್ಲವನ್ನು ನಾವು ಮಾಡುತ್ತೇವೆ. ಅವರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಇಲಾಖಾ ಧಿಕಾರಿಗಳು ಹಾಜರಿದ್ದರು.

ಸುವರ್ಣ ತ್ರಿಭುಜ: ಅಗತ್ಯ ಬಿದ್ದರೆ ತನಿಖೆ

ಸುವರ್ಣ ತ್ರಿಭುಜ ಬೋಟು ಅವಘಡಕ್ಕೆ ಸಂಬಂಧಿಸಿ ಈಗಾಗಲೇ ತನಿಖೆ ನಡೆಸಲಾಗಿದ್ದು, ಇದೀಗ ಇಡೀ ಪ್ರಕರಣ ವನ್ನು ಮುಚ್ಚಲಾಗಿದೆ. ಐದು ವರ್ಷಗಳ ಹಿಂದೆ ಆಗಿರುವ ಘಟನೆ ಬಗ್ಗೆ ನಾನು ಈಗ ಮಾತನಾಡಿದರೆ ರಾಜಕೀಯ ವಾಗುತ್ತದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಆ ಕುಟುಂಬಗಳಿಗೆ ನ್ಯಾಯ ಸಿಗಬೇಕು. ಬೋಟು ಮಾಲಕರಿಗೆ ವಿಮೆ ಕ್ಲೈಮ್ ಆಗದಿದ್ದರೆ ಸರಿ ಮಾಡಲು ಸರಕಾರದಿಂದ ಸಹಕಾರ ನೀಡಲಾಗುವುದು. ಅದೇ ರೀತಿ ಅವರಿಗೆ ಬೋಟು ಒದಗಿಸಲು ಸರಕಾರದಿಂದ ಸಹಾಯ ಮಾಡುವ ಕಾರ್ಯ ಮಾಡಲಾಗುವುದು. ಪ್ರಕರಣದ ಬಗ್ಗೆ ತನಿಖೆ ಅಗತ್ಯ ಇದ್ದರೆ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.

‘ರಾಜ್ಯದ ಎಲ್ಲ ಬಂದರುಗಳಲ್ಲಿ ಶೌಚಾಲಯ ಮತ್ತು ಮೀನು ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಮುಂದಿನ ತಿಂಗಳು ಪ್ರತಿಯೊಂದು ಕಡೆಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಗಳ ಬಗ್ಗೆ  ಚರ್ಚೆ ಮಾಡಲು ನಿರ್ಧರಿಸಲಾಗಿದೆ’
-ಮಂಕಾಳ ವೈದ್ಯ, ಸಚಿವರು

share
Next Story
X