Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ...

ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಅಪಾಯ: ಮೂರು ದಿನಗಳಲ್ಲಿ ಸಮಸ್ಯೆ ಪರಿಹರಿಸಲು ಡಿಸಿ ಕೂರ್ಮಾರಾವ್ ಸೂಚನೆ

16 Jun 2023 8:37 PM IST
share
ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಅಪಾಯ: ಮೂರು ದಿನಗಳಲ್ಲಿ ಸಮಸ್ಯೆ ಪರಿಹರಿಸಲು ಡಿಸಿ ಕೂರ್ಮಾರಾವ್ ಸೂಚನೆ

ಉಡುಪಿ, ಜೂ.16: ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್‌ಗಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿಯುವ ಅಪಾಯವಿದ್ದು, ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ 3 ದಿನಗಳ ಒಳಗೆ ಸೂಕ್ತ ಪರಿಹಾರ ಹುಡುಕಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ರಾಷ್ಟ್ರೀಯ ಹೆದ್ದಾರಿ 66ರ ಯೋಜನಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಮಳೆಗಾಲದ ಹಿನ್ನಲೆ ಸಾರ್ವಜನಿಕರ ಹಿತದೃಷ್ಠಿಯಿಂದ ತುರ್ತಾಗಿ ಕೈಗೊಳ್ಳ ಬೇಕಾದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಉಡುಪಿ ತಾಲೂಕು ಕಚೇರಿಯಲ್ಲಿ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸಂತೆಕಟ್ಟೆ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೈಗೊಂಡಿರುವ ಕಾಮಗಾರಿಯಿಂದ ಹೆದ್ದಾರಿ ಪಕ್ಕದಲ್ಲಿ ಬೃಹತ್ ಹೊಂಡ ನಿರ್ಮಾಣವಾಗಿದ್ದು ಇದರಿಂದಾಗಿ ಮಳೆಗಾಲದಲ್ಲಿ ನೀರು ತುಂಬಿ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಸಂಭವ ಇದೆ. ಇದರಿಂದ  ಈ ಭಾಗದಲ್ಲಿ ವಾಹನ ಸಂಚಾರ ಆಗುವ ಬಂದ್ ಆಗುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸೂಕ್ತ ವಿಧಾನವನ್ನು ಅಳವಡಿಸುವ ಮೂಲಕ ಹೆದ್ದಾರಿ ಕುಸಿತ ತಡೆಯಬಹುದು. ಅಲ್ಲದೆ ಸುರಕ್ಷಿತ ವಾಹನಗಳ ಸಂಚಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಜನೆಯನ್ನು ಶೀಘ್ರದಲ್ಲಿ ಸಿದ್ದಪಡಿಸಬೇಕು. ಅದರಂತೆ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದ ಮಳೆ ಬೀಳುವುದನ್ನು ಗಮನದಲ್ಲಿಟ್ಟುಕೊಂಡು ಸಮಸ್ಯೆಯ ಗಂಭೀರತೆಯನ್ನು ಅರ್ಥೈಸಿಕೊಂಡು ಯೋಜನೆ ರೂಪಿಸಿ, ಅತ್ಯಂತ ಶೀಘ್ರದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಲಮಿತಿಯಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು ಎಂದು ಅವರು  ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪೊಲೀಸ್ ಇಲಾಖೆಯಿಂದ ಗುರುತಿಸಲಾಗಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಅಗತ್ಯವಿರುವ ವೈಜ್ಞಾನಿಕ ಸುರಕ್ಷಾ ಕ್ರಮಗಳನ್ನು ಆದ್ಯತೆಯ ಮೇಲೆ ಕೈಗೊಂಡು ಲಿಖಿತ ವರದಿ ನೀಡುವಂತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ನಗರಸಭೆಯ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆಗೆ ಕೆಲವಡೆ ತೊಂದರೆಯಾಗಿದ್ದು ಅದನ್ನು ಸರಿಪಡಿಸಿಕೊಡುವಂತೆ ಸೂಚಿಸಿದರು.

ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಮಾಡುವ ಬಗ್ಗೆ ಹಾಗೂ ಕಲ್ಸಂಕ ಜಂಕ್ಷನ್ ಮತ್ತು ಟೈಗರ್ ಸರ್ಕಲ್ ಬಳಿ ವಾಹನ ದಟ್ಟಣೆ ತಪ್ಪಿಸಿ, ಜನ ಸಾಮಾನ್ಯರ ಸಂಚಾರಕ್ಕೆ ಅನುಕೂಲ ವಾಗುವಂತೆ ಸೂಕ್ತ ಕಾಮಗಾರಿಗಳನ್ನು ಕೈಗೊಳ್ಳಬೇಕು. ಮಣಿಪಾಲದಿಂದ ಕಲ್ಸಂಕ ವರೆಗೆ ಹೆದ್ದಾರಿಯಲ್ಲಿ ಬೀದಿದೀಪ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷ್ ಎಂ.ಹಾಕೆ, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಯತೀಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮುಹಮದ್ ಅಜ್ಮಿ, ಉಡುಪಿ ತಹಸೀಲ್ದಾರ್ ರವಿ ಅಂಗಡಿ, ನಗರಸಭೆ ಪೌರಾಯುಕ್ತ ರಮೇಶ್ ನಾಯಕ್, ಎನ್.ಎಚ್. 169ಎ ವಿಭಾಗದ ಇಂಜಿನಿಯರ್ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.

‘ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಮರದ ಕೊಂಬೆಗಳನ್ನು ತಕ್ಷಣ ತೆರವುಗೊಳಿಸಬೇಕು. ಪರ್ಕಳದಲ್ಲಿ ಸ್ಥಗಿತಗೊಂಡಿರುವ ಹೆದ್ದಾರಿ ಕಾಮಗಾರಿಯ ತಡೆಯಾಜ್ಞೆಯನ್ನು ತೆರವುಗೊಳಿಸುವ ಕುರಿತಂತೆ ರಾಜ್ಯದ ಅಡ್ವೋಕೇಟ್ ಜನರಲ್ ಅವರ ಬಳಿ ಚರ್ಚಿಸಿ, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ಅಗತ್ಯವಿರು ಕ್ರಮ ಕೈಗೊಳ್ಳ ಬೇಕು’
-ಕೂರ್ಮಾರಾವ್, ಜಿಲ್ಲಾಧಿಕಾರಿ

share
Next Story
X