ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಂದ ಮನವಿ ಸ್ವೀಕಾರ

ಉಡುಪಿ, ಜೂ.16: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಜೂ.20ರಂದು ಮಧ್ಯಾಹ್ನ 2.30ಕ್ಕೆ ಮಣಿಪಾಲ ರಜತಾದ್ರಿಯ ಜಿಪಂ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಹಿಂದುಳಿದ ಜಾತಿ ಸಮುದಾಯದವರಿಂದ ಮನವಿ ಸ್ವೀಕರಿಸಲಿದ್ದಾರೆ.
ಮನವಿ ಸಲ್ಲಿಸಲು ಇಚ್ಛಿಸುವ ಹಿಂದುಳಿದ ವರ್ಗಗಳ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಮುಂಚಿತವಾಗಿ ಸಭಾಂಗಣದಲ್ಲಿ ಉಪಸ್ಥಿತರಿರುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





