ಕ್ರಿಕೆಟ್ ನಿಂದ ಕೃಷಿಗೆ | ಚಾಮರಾಜನಗರದಲ್ಲಿ ಟ್ರ್ಯಾಕ್ಟರ್ ಖರೀದಿಸಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

ಚಾಮರಾಜನಗರ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಗಳಲ್ಲಿ ಒಂದಾದ ಬಿಸಿಸಿಐನ ಅಧ್ಯಕ್ಷ ರೋಜರ್ ಬಿನ್ನಿ ಕೃಷಿಯತ್ತ ಒಲವು ತೋರಿದ್ದು ಚಾಮರಾಜನಗರದಲ್ಲಿ ಟ್ರ್ಯಾಕ್ಟರ್ ಒಂದನ್ನು ಇಂದು(ಶುಕ್ರವಾರ) ಖರೀದಿ ಮಾಡಿದ್ದಾರೆ.
ಒಂದು ಕಾಲದ ಕ್ರಿಕೆಟ್ ಆಲ್ ರೌಂಡರ್ ಆಗಿದ್ದ ರೋಜರ್ ಬಿನ್ನಿ ಇದೀಗ ಗುಂಡ್ಲುಪೇಟೆ ಬಳಿ 45 ಎಕರೆ ಜಮೀನು ಖರೀದಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿದ ರೋಜರ್ ಬಿನ್ನಿ, ''ನಮ್ಮ ಪೂರ್ವಿಕರು ಕೃಷಿಕರಲ್ಲ, ಆದರೆ ನಾನು ಕೃಷಿಯತ್ತ ಆಸಕ್ತಿ ಬೆಳೆಸಿಕೊಂಡಿದ್ದು ನಾನು ಗುಂಡ್ಲುಪೇಟೆಯ ಸಮೀಪದಲ್ಲಿ ಜಮೀನು ಖರೀದಿಸಿದ್ದು, ಕೃಷಿ ಚಟುವಟಿಕೆಗಾಗಿ ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿ ಮಾಡಲಾಗಿದೆ'' ಎಂದು ತಿಳಿಸಿದ್ದಾರೆ.
Next Story




.jpeg)


