Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಂದಿನ ಸರ್ಕಾರದ ತಪ್ಪನ್ನು ಸರಿಪಡಿಸಿ...

ಹಿಂದಿನ ಸರ್ಕಾರದ ತಪ್ಪನ್ನು ಸರಿಪಡಿಸಿ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಉಳಿಸುವ ಕೆಲಸ ಮಾಡಿದ್ದೇವೆ: ಪ್ರಿಯಾಂಕ್ ಖರ್ಗೆ

17 Jun 2023 9:17 AM IST
share
ಹಿಂದಿನ ಸರ್ಕಾರದ ತಪ್ಪನ್ನು ಸರಿಪಡಿಸಿ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಉಳಿಸುವ ಕೆಲಸ ಮಾಡಿದ್ದೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜಿಜೆಪಿಯ ಆಡಳಿತಾವಧಿಯಲ್ಲಿ ಕೇಸರೀಕರಣಗೊಂಡಿದ್ದ ಪಠ್ಯವನ್ನು ರಾಜ್ಯ ಸರ್ಕಾರ ಪುನಃ ಪರಿಷ್ಕರಿಸಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದಿನ BJP ಸರ್ಕಾರ ಶಿಕ್ಷಣವನ್ನು ಕೇಸರೀಕರಣಗೊಳಿಸಿ ಸಾಂವಿಧಾನಿಕ ಭಾರತ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿತ್ತು. ನಾವು ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಇಂದು ಹಿಂದಿನ ಸರ್ಕಾರದ ತಪ್ಪನ್ನು ಸರಿಪಡಿಸಿ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಉಳಿಸುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

6ನೇ ತರಗತಿಯಲ್ಲಿ ಕಲ್ಯಾಣ ಕರ್ನಾಟಕದ ಪ್ರಸಿದ್ದ ಕವಿಗಳಾದ ಶ್ರೀ ಚೆನ್ನಣ್ಣ ವಾಲೀಕಾರ ಡಾ. ಅಂಬೇಡ್ಕರ್ ಬಗ್ಗೆ ಬರೆದಿದ್ದ ‘ನೀ ಹೋದ ಮರುದಿನ’ ಪದ್ಯ ಪುನರ್ಸ್ಥಾಪಿಸಲಾಗಿದೆ. ಸಾವಿತ್ರಿಬಾಯಿಯವರ ಪಠ್ಯ, ಸಾರಾ ಅಬೂಬಕರ್ ಅವರ ಕತೆ, ಕನ್ನಡದ ಮೊದಲ ಗದ್ಯಗ್ರಂಥವಾದ ವಡ್ಡಾರಾಧನೆಯ ಸುಕುಮಾರ ಸ್ವಾಮಿಯ ಕಥೆ ಗಳನ್ನು ಪುನರ್ಸ್ಥಾಪಿಸಲಾಗಿದೆ. ಮಹರ್ಷಿ ವಾಲ್ಮೀಕಿಯವರನ್ನಿ “ದಾರಿಗಳ್ಳನಾಗಿದ್ದ” ಎಂಬ ಉಲ್ಲೇಖವನ್ನು ಕೈಬಿಡಲಾಗಿದ್ದು, ಜಾತಿ ಮತ  ಧರ್ಮಗಳ ಕಟ್ಟಳೆಗಳಿಲ್ಲವೆಂದು ಸಾರುವ “ಬ್ಲಡ್ ಗ್ರೂಪ್” ಗದ್ಯ, ರಾಷ್ಟ್ರೀಯ ಭಾವೈಕ್ಯತೆ ಸಾರುವ ‘ಉರುಸುಗಳಲ್ಲಿ ಭಾವೈಕ್ಯತೆ’ ಗದ್ಯ ವನ್ನು ಪಠ್ಯಪುಸ್ತಕದಲ್ಲಿ ಮರುಸೇರ್ಪಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಮಾಜ ವಿಜ್ಞಾನದ ಇತಿಹಾಸ ಪಠ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒದಗಿಸಿರುವ 371(J) ವಿಶೇಷ ಸ್ಥಾನಮಾನವನ್ನು ಸಾಂವಿಧಾನಿಕ ಅನುಚ್ಛೇಧ ವೆಂದು ಬೋಧಿಸುವುದು, ಜೈನ, ಭೌದ್ಧ ಧರ್ಮಗಳ ಉದಯದ ಪಠ್ಯ, ಮಹಾವೀರ ಮತ್ತು ಬುದ್ಧಗುರುಗಳ ವಿಚಾರಗಳ ಮರು ಸೇರ್ಪಡೆ, ಮಾನವ ಹಕ್ಕುಗಳ ಪಠ್ಯ, ಮೈಸೂರು ರಾಜರ ಕೊಡುಗೆಗಳ ಉಲ್ಲೇಖ ಸೇರ್ಪಡೆ ಮಾಡಲಾಗಿದೆ.

ಮಹಿಳಾ ಸಮಾಜ ಸುಧಾರಕಿಯರ, ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರ್ಪಡೆ, ‘ಭಾಷಾಭಿಮಾನದಿಂದ ದೇಶದ ಏಕತೆಗೆ ಧಕ್ಕೆಯಾಗಲಿದೆ’ ಎಂದಿದ್ದ ಭಾಗ ತೆರವು ಮಾಡಲಾಗಿದೆ. ಈ ನಿರ್ಣಯಗಳು, ಹಿಂದಿನ ಬಿಜೆಪಿ ಸರ್ಕಾರದಂತೆ ರಾಜಕೀಯ ಗುಣದ್ದಲ್ಲ. ಬದಲಿಗೆ ವಿವಿಧ ವಿಷಯ ತಜ್ಞರಿಂದ ಪರಿಶೀಲನೆ ನಡೆಸಿ 6-10ನೇ ತರಗತಿಗಳ ಪಠ್ಯ ತಿದ್ದುಪಡಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದಿನ BJP ಸರ್ಕಾರ ಶಿಕ್ಷಣವನ್ನು ಕೇಸರೀಕರಣಗೊಳಿಸಿ ಸಾಂವಿಧಾನಿಕ ಭಾರತ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿತ್ತು.

ನಾವು ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಇಂದು ಹಿಂದಿನ ಸರ್ಕಾರದ ತಪ್ಪನ್ನು ಸರಿಪಡಿಸಿ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಉಳಿಸುವ ಕೆಲಸ ಮಾಡಿದ್ದೇವೆ.

1/5

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 16, 2023
share
Next Story
X