ದ.ಕ.ಜಿಪಂ ನಿರ್ಗಮನ ಸಿಇಒಗೆ ಬೀಳ್ಕೊಡುಗೆ

ಮಂಗಳೂರು: ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ದ.ಕ.ಜಿಪಂ ಸಿಇಒ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಡಾ.ಕುಮಾರ್ ಅವರನ್ನು ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ವತಿಯಿಂದ ಶನಿವಾರ ಸನ್ಮಾನಿಸಲಾಯಿತು.
ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಸಿಎ ಶಾಂತಾರಾಮ್ ಶೆಟ್ಟಿ, ಗೌರವ ಸಲಹೆಗಾರ ಪ್ರಭಾಕರ ಶರ್ಮ, ಖಜಾಂಚಿ ಮೋಹನ್ ಶೆಟ್ಟಿ, ನಿರ್ದೇಶಕರಾದ ಪಿ.ಬಿ.ಹರೀಶ್ ರೈ, ಡಾ.ಸುಮನಾ ಬೋಳೂರು ಉಪಸ್ಥಿತರಿದ್ದರು.
Next Story