ಹನೂರು ಬಳಿ ರಸ್ತೆ ಅಪಘಾತ; ಬೈಕ್ ಸವಾರ ಮೃತ್ಯು

ಹನೂರು : ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳುಬೆಟ್ಟ ಸಮೀಪ ರವಿವಾರ ವರದಿಯಾಗಿದೆ.
ಮೃತರನ್ನು ಬೆಂಗಳೂರು ಮೂಲದ ವೆಂಕಟಪ್ಪ ಎಂದು ಗುರುತಿಸಲಾಗಿದೆ.
ವೆಂಕಟಪ್ಪ, ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನ ಬೆಟ್ಟಕ್ಕೆ ತನ್ನ ಸ್ನೇಹಿತನ ಜೊತೆಗೆ ತೆರಳುತ್ತಿದ್ದ ಎಂದು ತಿಳಿದುಬಂದಿದೆ.
ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿಗೂ ಗಾಯಗಳಾಗಿದ್ದು, ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Next Story





