'ಹಿಂದುತ್ವ' ಸಮಾಜವನ್ನು ಇಬ್ಭಾಗಿಸಿತ್ತು, 'ಶಕ್ತಿ' ಪೂಜ್ಯ ಸ್ಥಳಗಳಿಗೆ ಜನರನ್ನು ಹತ್ತಿರವಾಗಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಮಹಿಳೆಯರಿಗೆ ‘ಶಕ್ತಿ ಯೋಜನೆ’ ಜಾರಿಗೊಳಿಸಿದ ಎರಡನೆ ವಾರಕ್ಕೆ ಕಾಲಿಟ್ಟಿದ್ದು, ಜೂ.17ರ ಶನಿವಾರ ದಿನದಂದು ರಾಜ್ಯದೆಲ್ಲೆಡೆಯ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರ ದಂಡೇ ಹರಿದುಬಂದಿದ್ದು, ಎತ್ತ ನೋಡಿದರೂ ಸರಕಾರಿ ಬಸ್‍ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ.
ಇದೀಗ ಶಕ್ತಿ ಯೋಜನೆ ಯಶಸ್ಸಿನ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ''ಹಿಂದುತ್ವ - ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು. ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲಾ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ನ “ಶಕ್ತಿ” ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ'' ಎಂದು ವ್ಯಾಖ್ಯಾನಿಸಿದ್ದಾರೆ.
''ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ. ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ'' ಎಂದು ಅವರು ಬರೆದುಕೊಂಡಿದ್ದಾರೆ.
ಹಿಂದುತ್ವ - ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿತ್ತು.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 18, 2023
ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲಾ. ಆದರೆ ಪ್ರೀತಿ ಹಾಗೂ ಕಾಂಗ್ರೆಸ್ ನ “ಶಕ್ತಿ” ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ.
ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ… pic.twitter.com/ujTKB4Odg8







