Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿ...

ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿ ಖಚಿತ: ಸಚಿವ ರಹೀಂಖಾನ್ ಭರವಸೆ

18 Jun 2023 8:51 PM IST
share
ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಜಾರಿ ಖಚಿತ: ಸಚಿವ ರಹೀಂಖಾನ್ ಭರವಸೆ

ಬೆಂಗಳೂರು, ಜೂ. 18: ‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಗೊಳಿಸಿ, ನೇರಪಾವತಿ ಜಾರಿಗೊಳಿಸುವುದು ಖಚಿತ’ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಭರವಸೆ ನೀಡಿದ್ದಾರೆ.

ರವಿವಾರ ನಗರದ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ‘ಕರ್ನಾಟಕ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ’ ಆಯೋಜಿಸಿದ್ದ ‘ಸಚಿವರೊಂದಿಗಿನ ಸಂವಾದ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳಲ್ಲಿ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ನಿಜವಾದ ದುಡಿಮೆಗಾರರಾಗಿದ್ದಾರೆ’ ಎಂದರು.

ಕಸ ಗುಡಿಸುವ ಪೌರಕಾರ್ಮಿಕರನ್ನು ನೇರಪಾವತಿ ಅಡಿಗೆ ತಂದು ಇನ್ನುಳಿದ ಕಸ ಸಾಗಿಸುವ ಚಾಲಕರು ನೀರು ಸರಬರಾಜು ಸಹಾಯಕರನ್ನು ಗುತ್ತಿಗೆ ಪದ್ದತಿಯಲ್ಲೇ ಉಳಿಸಿರುವುದು ತಾರತಮ್ಯದ ಕ್ರಮವಾಗಿದೆ. ಈ ನೌಕರರನ್ನು ನೇರಪಾವತಿ ವ್ಯವಸ್ಥೆಗೆ ತರುವ ಸಂಬಂದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು. ಬಜೆಟ್ ಅಧಿವೇಶನದ ನಂತರ ಅಧಿಕಾರಿಗಳು ಹಾಗೂ ಸಂಘದ ಪ್ರತಿನಿಧಿಗಳೊಂದಿಗೆ ಕುಂದುಕೊರತೆ ಸಭೆ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ ಮಾತನಾಡಿ, ‘ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ನೇರಪಾವತಿ ಜಾರಿಗಾಗಿ ಹಿಂದಿನ ಸರಕಾರದಲ್ಲಿ ಹೋರಾಟ ನಡೆಸಿದರೂ ಬಿಜೆಪಿ ಸರಕಾರ ತಿರುಗಿಯೂ ನೋಡಲಿಲ್ಲ. ಕಾಂಗ್ರೆಸ್ ಪಕ್ಷ ಪೌರಕಾರ್ಮಿಕರ ಖಾಯಂಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಿತು. ಇದೆ ಕಾರಣಕ್ಕೆ ಹೊರಗುತ್ತಿಗೆ ನೌಕರರು ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಈಗ ಪ್ರಣಾಳಿಕೆಯ ಅಂಶವನ್ನು ಜಾರಿಗೊಳಿಸುವ ಬದ್ದತೆಯನ್ನು ಕಾಂಗ್ರೆಸ್ ಸರಕಾರ ತೋರಬೇಕಿದೆ ಎಂದರು.

ಇದೇ ವೇಳೆ ಕಾರ್ಮಿಕರು ಮಾಜಿ ಮುಖ್ಯಮಂತ್ರಿಗಳ ಸ್ವಕ್ಷೇತ್ರ ಶಿಗ್ಗಾಂವಿಯ ಸವಣೂರು ಪುರಸಭೆಯ ಹೊರಗುತ್ತಿಗೆ ನೌಕರರಿಗೆ 22ತಿಂಗಳಿನಿಂದ ವೇತನ ಪಾವತಿಸದಿರುವುದು, ರಾಮನಗರ ಜಿಲ್ಲೆಯಲ್ಲಿ ಪೌರಕಾರ್ಮಿಕರ ನೇಮಕಾತಿ ಪಟ್ಟಿ ಪ್ರಕಟವಾಗಿದ್ದರೂ, ನೇಮಕಾತಿ ಆದೇಶ ನೀಡದಿರುವುದು, ಹಲವು ಜಿಲ್ಲೆಗಳಲ್ಲಿ ಸಕಾಲಕ್ಕೆ ವೇತನ ನೀಡದೆ ಏಜೆನ್ಸಿಗಳು ಕಿರುಕುಳ ನೀಡುತ್ತಿರುವ ಬಗ್ಗೆ ಸಚಿವರ ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಹೊರಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ವಿರೇಶ್, ಕಲ್ಬುರ್ಗಿ ವಿಭಾಗ ಸಂಚಾಲಕ ಸಿದ್ದರಾಮ ಪಾಟೀಲ, ಬೆಳಗಾವಿ ವಿಭಾಗದ ರಾಜೂ ಹೊಸಮನಿ ಮತ್ತಿತರರು ಉಪಸ್ಥಿತರಿದ್ದರು

share
Next Story
X