Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ವಿರುದ್ಧ ಹೋರಾಡಲು...

ಬಿಜೆಪಿಯ ವಿರುದ್ಧ ಹೋರಾಡಲು ಪ್ರತಿಪಕ್ಷಗಳು ‘ಕೊಟ್ಟು ತೆಗೆದುಕೊಳ್ಳುವ’ ನೀತಿಗೆ ಸಿದ್ಧವಿರಬೇಕು: ಕಪಿಲ್ ಸಿಬಲ್

2024ರ ಲೋಕಸಭಾ ಚುನಾವಣೆಗಳ ಹಿನ್ನೆಲೆ

18 Jun 2023 11:31 PM IST
share
ಬಿಜೆಪಿಯ ವಿರುದ್ಧ ಹೋರಾಡಲು ಪ್ರತಿಪಕ್ಷಗಳು ‘ಕೊಟ್ಟು ತೆಗೆದುಕೊಳ್ಳುವ’ ನೀತಿಗೆ ಸಿದ್ಧವಿರಬೇಕು: ಕಪಿಲ್ ಸಿಬಲ್
2024ರ ಲೋಕಸಭಾ ಚುನಾವಣೆಗಳ ಹಿನ್ನೆಲೆ

ಹೊಸದಿಲ್ಲಿ: ಪ್ರತಿಪಕ್ಷಗಳು ಒಂದು ಸಾಮಾನ್ಯ ಉದ್ದೇಶವನ್ನು ಮತ್ತು ಅದನ್ನು ಪ್ರತಿಬಿಂಬಿಸುವ ಕಾರ್ಯಸೂಚಿಯನ್ನು ಹೊಂದಿದ್ದರೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜಿಪಿಯೆದುರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವಾಗ ಕೊಟ್ಟು ತೆಗೆದುಕೊಳ್ಳುವ ನೀತಿಯನ್ನು ಅನುಸರಿಸಲು ಸಿದ್ಧವಿದ್ದರೆ 2024ರಲ್ಲಿ ಯುಪಿಎ-3 ಸರಕಾರವು ಅಧಿಕಾರಕ್ಕೆ ಬರುವುದು ಬಹುತೇಕ ಸಾಧ್ಯವಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ರವಿವಾರ ಹೇಳಿದರು.

ಪ್ರತಿಪಕ್ಷಗಳು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬದಲು ಒಗ್ಗಟ್ಟಿನಿಂದ ‘ಭಾರತಕ್ಕಾಗಿ ಹೊಸ ದೂರದೃಷ್ಟಿ’ಯ ಬಗ್ಗೆ ಮಾತನಾಡಬೇಕು ಎಂದೂ ಮಾಜಿ ಕಾಂಗ್ರೆಸ್ ನಾಯಕ ಸಿಬಲ್ ನ್ಯೂಯಾರ್ಕ್ನಿಂದ ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.

ಒಂದೇ ಸ್ಥಾನಕ್ಕಾಗಿ ಎರಡು ಅಥವಾ ಹೆಚ್ಚಿನ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾತೊರೆಯುತ್ತಿರುವ ರಾಜ್ಯಗಳಲ್ಲಿ ಮತ್ತು ಕ್ಷೇತ್ರಗಳಲ್ಲಿ ಟಿಕೆಟ್ಗಳ ಹಂಚಿಕೆ ಸಂದರ್ಭ ಕೊಡುವ ಮತ್ತು ತೆಗೆದುಕೊಳ್ಳುವ ನೀತಿಯನ್ನು ಅನುಸರಿಸುವ ಅಗತ್ಯವಿದೆ. ಈ ಮೂರು ವಿಷಯಗಳ ಬಗ್ಗೆ ಸಹಮತ ಮೂಡಿದರೆ ಯುಪಿಎ-3 ಸರಕಾರ ರಚನೆ ಬಹುತೇಕ ಸಾಧ್ಯ ಎಂದು ತಾನು ಭಾವಿಸಿದ್ದೇನೆ ಎಂದರು.

‌ತನ್ನ ನಿಲುವನ್ನು ವಿವರಿಸಿದ ಅವರು,ಉದಾಹರಣೆಗೆ ರಾಜಸ್ಥಾನ, ಉತ್ತರಾಖಂಡ, ಹರ್ಯಾಣ,ಮಧ್ಯಪ್ರದೇಶ ಮತ್ತು ಛತ್ತೀಸ್ಗಡದಂತಹ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಬಿಜೆಪಿಗೆ ನಿಜವಾದ ವಿರೋಧ ಪಕ್ಷವಾಗಿದೆ. ಈ ರಾಜ್ಯಗಳಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ.

ಕಾಂಗ್ರೆಸೇತರ ವಿರೋಧ ಪಕ್ಷಗಳ ಸರಕಾರಗಳಿರುವ ರಾಜ್ಯಗಳಲ್ಲಿ, ಉದಾಹರಣೆಗೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪ್ರಬಲ ಪಾಲುದಾರ ಎನ್ನುವುದು ಎಲ್ಲರಿಗೂ ಗೊತ್ತು. ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಬಿಕ್ಕಟ್ಟು ಎದುರಾಗುವ ಕೆಲವೇ ಲೋಕಸಭಾ ಕ್ಷೇತ್ರಗಳಿವೆ ಎಂದು ಹೇಳಿದ ಸಿಬಲ್,ಬಿಜೆಪಿಯನ್ನು ಸೋಲಿಸಬಹುದು ಎನ್ನುವುದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ನ ಗೆಲುವು ನಿದರ್ಶನವಾಗಿದೆ ಎಂದರು. ಅದಾಗ್ಯೂ ಸಾರ್ವತ್ರಿಕ ಚುನಾವಣೆಗಳಲ್ಲಿ ಸಾರಾಸಗಟು ಹೇಳಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ,ಲೋಕಸಭಾ ಚುನಾವಣೆಯನ್ನು ಸಂಪೂರ್ಣ ವಿಭಿನ್ನವಾದ ನೆಲೆಯಲ್ಲಿ ಹೋರಾಡಲಾಗುತ್ತದೆ ಎಂದು ಹೇಳಿದರು.

2024ರ ಚುನಾವಣೆಯಲ್ಲಿ ಹೋರಾಟವು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವಲ್ಲ,ಅವರು ಕಾಯಂಗೊಳಿಸಲು ಬಯಸಿರುವ ಸಿದ್ಧಾಂತದ ವಿರುದ್ಧವಾಗಿರಲಿದೆ ಎಂದೂ ಸಿಬಲ್ ಬೆಟ್ಟು ಮಾಡಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಳಿಗಾಗಿ ಬಿಜೆಪಿ ವಿರೋಧಿ ಮೈತ್ರಿಕೂಟ ರಚನೆಯ ಕುರಿತು ಹಿರಿಯ ಪ್ರತಿಪಕ್ಷ ನಾಯಕರು ಜೂ.23ರಂದು ಪಾಟ್ನಾದಲ್ಲಿ ನಿರ್ಣಾಯಕ ಸಭೆಯೊಂದನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಸಿಬಲ್ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

share
Next Story
X