Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವನೂರರ ‘ಎದೆಗೆ ಬಿದ್ದ ಅಕ್ಷರ’...

ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರಿಸುವಂತೆ ಎಸ್‍ಎಫ್‍ಐ ಒತ್ತಾಯ

18 Jun 2023 11:39 PM IST
share
ದೇವನೂರರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಪಠ್ಯದಲ್ಲಿ ಸೇರಿಸುವಂತೆ ಎಸ್‍ಎಫ್‍ಐ ಒತ್ತಾಯ

ಬೆಂಗಳೂರು, ಜೂ.18: ರಾಜ್ಯ ಸರಕಾರ ಪಠ್ಯದಲ್ಲಿ ದೇವನೂರು ಮಹಾದೇವರವರ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರ್ಪಡೆ ಮಾಡಿ, ಆದೇಶ ಹೊರಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ಆಗ್ರಹಿಸಿದೆ.

ರಾಜ್ಯ ಸರಕಾರವು ಆರರಿಂದ ಹತ್ತನೇ ತರಗತಿವರೆಗಿನ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಕೆಲವು ಪಾಠಗಳನ್ನು ಸೇರ್ಪಡೆ ಮಾಡಲು ತಿದ್ದುಪಡಿ ಮತ್ತು ಸೇರ್ಪಡೆಗೊಳಿಸಲು ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದೆ. ಹಾಗೆಯೇ ‘ಎದೆಗೆ ಬಿದ್ದ ಅಕ್ಷರ’ ಪಾಠವನ್ನು ಸೇರಿಸಲು ಸಂಘಟನೆ ಆಗ್ರಹಿಸಿದೆ.  

ಹಿಂದಿನ ವರ್ಷ ಬಿಜೆಪಿ ಸರಕಾರ ಆರರಿಂದ ಹತ್ತನೇ ತರಗತಿವರೆಗೆ ಕೆಲವು ಪಾಠಗಳನ್ನು ತಿದ್ದುಪಡಿ, ಸೇರ್ಪಡೆ ಮಾಡುವುದರ ಮೂಲಕ ಪಠ್ಯ ಪರಿಷ್ಕರಣೆ ಮಾಡಿ ವಿದ್ಯಾರ್ಥಿಗಳ ಮನಸ್ಸಿನೊಳಗೆ ಕೋಮು ಭಾವನೆಯ ವಿಷ ಬೀಜ ಬಿತ್ತಲು ಪ್ರಯತ್ನಿಸಿತ್ತು. ಮಹಿಳೆಯರು ಕೇವಲ ಭೋಗದ ವಸ್ತು ಹಾಗೂ ಮನೆ ಕೆಲಸಕ್ಕೆ ಸೀಮಿತ ಎಂಬ ಅರ್ಥದಲ್ಲಿ ಇರುವಂತ ಕೆಲವು ಪಾಠವನ್ನು ಸೇರಿಸಿತ್ತು. ಇದನ್ನು ಸರಿಪಡಿಸಿ, ಸುತ್ತೋಲೆ ಹೋರಡಿಸಿರುವುದು ಸ್ವಾಗತಾರ್ಹ ಎಂದು ಸಂಘಟನೆ ತಿಳಿಸಿದೆ.

ಬಿಜೆಪಿ ಸರಕಾರ ಕೈ ಬಿಟ್ಟಿರುವ ಬಹುತೇಕ ಎಲ್ಲ ಪಾಠಗಳನ್ನು ಇಂದಿನ ಕಾಂಗ್ರೆಸ್ ಸರಕಾರ ಮರುಸೇರ್ಪಡೆ ಮಾಡಿದೆ. ಆದರೆ 10ನೆ ತರಗತಿ ಪ್ರಥಮ ಭಾಷೆಯಾದ ಕನ್ನಡ ಗದ್ಯ ಭಾಗದಲ್ಲಿ ರಾಜ್ಯದ ಹಿರಿಯ ಸಾಹಿತಿ ದೇವನೂರು ಮಹಾದೇವರ "ಎದೆಗೆ ಬಿದ್ದ ಅಕ್ಷರ" ಎಂಬ ಪಾಠವು ರಾಜ್ಯ ಸರಕಾರ ಬಿಡುಗಡೆ ಮಾಡಿರುವ ತಿದ್ದೋಲೆಯಲ್ಲಿ ಇಲ್ಲದಿರುವುದು ನೋವಿನ ವಿಷಯ ಆಗಿದೆ ಎಂದು ಸಂಘಟನೆ ತಿಳಿಸಿದೆ.

‘ಎದೆಗೆ ಬಿದ್ದ ಅಕ್ಷರ’ ಪಾಠವು ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಹಿಂದೆ ಬಿಜೆಪಿ ಸರಕಾರದ ಕೋಮುವಾದದ ವಿರುದ್ಧ ದೇವನೂರು ಮಹಾದೇವ ಬಹಿರಂಗವಾಗಿ ಪ್ರತಿಭಟನೆಯನ್ನು ಮಾಡಿದ್ದರು. ತಮ್ಮ ಪುಸ್ತಕವಾದ ಎದೆಗೆ ಬಿದ್ದ ಅಕ್ಷರ ಭಾಗವನ್ನು ಗದ್ಯಭಾಗದಲ್ಲು ಪ್ರಕಟಿಸಲು ನೀಡಿದ್ದ ಅನುಮತಿ ವಾಪಸ್ಸು ಪಡೆದಿದ್ದರು. 

ಕೂಡಲೇ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆಯ ಸಚಿವರು ಗಮನಹರಿಸಿ 10ನೆ ತರಗತಿ ಕನ್ನಡ ಪ್ರಥಮ ಭಾಷೆ ವಿಷಯದಲ್ಲಿ ಸೇರ್ಪಡೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಅಮರೇಶ ಕಡಗದ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
Next Story
X