ಚುನಾವಣೆಯಲ್ಲಿ ಸೋತರೂ ಜಗದೀಶ್ ಶೆಟ್ಟರ್ ಕೈ ಬಿಡದ ಕಾಂಗ್ರೆಸ್!

ಬೆಂಗಳೂರು: ಬಿಜೆಪಿ ತ್ಯಜಿಸಿ ಕಾಂಗ್ರೆಸ್ಗೆ ಸೇರಿ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ್ದ ಜಗದೀಶ್ ಶೆಟ್ಟರ್ಗೆ ಕಾಂಗ್ರೆಸ್ ಇದೀಗ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಶೆಟ್ಟರ್ ಗೆ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕಣೆ ಮಾಡಿತ್ತು. ಇದರಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದ ಅವರು, ಬಳಿಕ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನ ಕಾಯಿ ವಿರುದ್ಧ ಸೋಲು ಅನುಭವಿಸಿದ್ದರು.
ಇದೀಗ ಸೋತರೂ ಜಗದೀಶ್ ಶೆಟ್ಟರ್ ಅವರ ಕೈ ಬಿಡದ ಕಾಂಗ್ರೆಸ್ ನಾಯಕರು, ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ: ವಿಧಾನ ಪರಿಷತ್ ಉಪ ಚುನಾವಣೆ; ಶೆಟ್ಟರ್ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್
Next Story







