ಮಂಗಳೂರು: ಜಮೀನು ಕೊಡಿಸುವುದಾಗಿ ನಂಬಿಸಿ ವಂಚನೆ; ಪ್ರಕರಣ ದಾಖಲು

ಮಂಗಳೂರು, ಜೂ.19: ಬ್ರೋಕರ್ ಮತ್ತು ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ತಿಪ್ಪೇಸ್ವಾಮಿ ಮತ್ತು ಹರ್ಷವರ್ಧನ ಗೌಡ ಎಂಬವರು ಉಳ್ಳಾಲದಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 35 ಲಕ್ಷ ರೂ. ಪಡೆದು ವಂಚಿಸಿರುವುದಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ತನಗೆ ಜಾಗವನ್ನು ಕೊಡಿಸಿಲ್ಲ. ಹಣವನ್ನೂ ವಾಪಸ್ ನೀಡಿಲ್ಲ. ಹಣ ಕೇಳಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story