ಚಿಕ್ಕಮಗಳೂರು: ಮಹಿಳೆಯ ಹತ್ಯೆಗೈದು ಸುಟ್ಟುಹಾಕಿದ್ದ ಆರೋಪಿಯ ಬಂಧನ

ಚಿಕ್ಕಮಗಳೂರು, ಜೂ.19: ಅಪರಿಚಿತ ಮಹಿಳೆಯ ಮೇಲೆ ಹಲ್ಲೆ ಮಾಡಿ, ಅನುಮಾನಾಸ್ಪದವಾಗಿ ಸುಟ್ಟು ಹಾಕಿರುವ ಆರೋಪಿ ಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಾಗರಾಜ್ ನಾಯ್ಕಾ ಕಳೆದ ಎರಡು ತಿಂಗಳ ಹಿಂದೆ ನಗರದ ಬಸ್ ನಿಲ್ದಾಣದಲ್ಲಿ ಊಟ ಕೊಡಿಸುವಂತೆ ಕೇಳಿದ ಜಯಮ್ಮ ಎಂಬ ಅಪರಿಚಿತ ಮಹಿಳೆಯನ್ನು ಮನೆಗೆ ಕರೆದುಕೊಂಡು ಬಂದು ಆಶ್ರಯ ನೀಡಿದ್ದಾನೆ. ಕಳೆದ ಎರಡು ತಿಂಗಳಿಂದ ನಾಗರಾಜ್ ನಾಯ್ಕಾ ಮನೆಯಲ್ಲಿದ್ದ ಮಹಿಳೆಯ ಮೇಲೆ ಕಳೆದ ಮಂಗಳವಾರ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದು, ಮಹಿಳೆ ಮೃತಪಟ್ಟಿದ್ದಾಳೆ. ನಂತರ ಆಕೆಯನ್ನು ಮನೆಯಿಂದ ಒಂದು ಕಿ.ಮೀ. ದೂರದಲ್ಲಿ ತಾನು ಕೆಲಸ ಮಾಡುತ್ತಿದ್ದ ತೋಟದಲ್ಲಿಯೇ ಸುಟ್ಟು ಹಾಕಿದ್ದಾನೆ ಎನ್ನಲಾಗಿದೆ.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಿರುವ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





