Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯೋಜನಾ ವ್ಯಾಪ್ತಿಯಲ್ಲಿ ರೇರಾ ಅನುಮತಿ...

ಯೋಜನಾ ವ್ಯಾಪ್ತಿಯಲ್ಲಿ ರೇರಾ ಅನುಮತಿ ಇಲ್ಲದೆ ನಿವೇಶನ ನೋಂದಣಿ ಮಾಡದಿರಲು ತಿದ್ದುಪಡಿ: ಝಮೀರ್ ಅಹ್ಮದ್ ಖಾನ್

‘ದಂಡ ಪಾವತಿಸದ ಪ್ರತಿಷ್ಟಿತ ಬಿಲ್ಡರ್ ಗಳ ವಿರುದ್ಧ ಕ್ರಮಕ್ಕೆ ಸೂಚನೆ’

20 Jun 2023 7:30 PM IST
share
ಯೋಜನಾ ವ್ಯಾಪ್ತಿಯಲ್ಲಿ ರೇರಾ ಅನುಮತಿ ಇಲ್ಲದೆ ನಿವೇಶನ ನೋಂದಣಿ ಮಾಡದಿರಲು ತಿದ್ದುಪಡಿ: ಝಮೀರ್ ಅಹ್ಮದ್ ಖಾನ್
‘ದಂಡ ಪಾವತಿಸದ ಪ್ರತಿಷ್ಟಿತ ಬಿಲ್ಡರ್ ಗಳ ವಿರುದ್ಧ ಕ್ರಮಕ್ಕೆ ಸೂಚನೆ’

ಬೆಂಗಳೂರು, ಜೂ.20: ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ರೇರಾ (ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ)ದ ಅನುಮತಿ ಇಲ್ಲದೆ ನಿವೇಶನಗಳ ನೋಂದಣಿ ಮಾಡದಂತೆ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮಂಗಳವಾರ ನಗರದ ಶೇಷಾದ್ರಿಪುರದಲ್ಲಿರುವ ಕೆಎಂಡಿಸಿ ಭವನದಲ್ಲಿ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಯೋಜನಾ ವ್ಯಾಪ್ತಿಯಲ್ಲಿ ಹೊಸದಾಗಿ ಬಡಾವಣೆ ರಚನೆ ಮಾಡುವವರು ರೇರಾ ಅನುಮತಿ ಪಡೆಯದೆ ನಿವೇಶನ ಮಾರಾಟ ಮಾಡುತ್ತಿದ್ದಾರೆ ಎಂದರು.

ಇನ್ನೂ ಕೆಲವೆಡೆ ವಿವಾದ ಇರುವ ಜಮೀನುಗಳಲ್ಲಿ ಬಡಾವಣೆ ರಚನೆ ಮಾಡಿರುವುದರಿಂದ ನಿವೇಶನ ಖರೀದಿಸಿದವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹೀಗಾಗಿ ಇದನ್ನು ತಪ್ಪಿಸಲು ರೇರಾ ಅನುಮತಿ ಇಲ್ಲದಿರುವ ಬಡಾವಣೆಗಳ ನಿವೇಶನ ನೋಂದಣಿ ಮಾಡುವಂತಿಲ್ಲ ಎಂಬ ಕಾನೂನು ತರಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಯೋಜನಾ ವ್ಯಾಪ್ತಿಯಲ್ಲಿ ಬಡಾವಣೆ ರಚನೆಗೆ ರೇರಾ ದಲ್ಲಿ ನೋಂದಣಿ ಕಡ್ಡಾಯ ಎಂದು ನಿಯಮ ಇದ್ದರೂ ಅನಧಿಕೃತವಾಗಿ ಕೆಲವರು ಬಡಾವಣೆ ರಚಿಸಿ ನಿವೇಶನ ಮಾರಾಟ ಮಾಡುತ್ತಿದ್ದಾರೆ. ಸಮಸ್ಯೆ ಉಂಟಾದರೆ ನಿವೇಶನ ಖರೀದಿಸಿದವರು ರೇರಾ ಬಳಿ ಬರುತ್ತಿದ್ದಾರೆ ಎಂದು ಅವರು ಹೇಳಿದರು.

ಆದರೆ, ಆ ಹಂತದಲ್ಲಿ ರೇರಾ ಏನೂ ಮಾಡಲು ಬರುವುದಿಲ್ಲ. ಹೀಗಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಯಮಾವಳಿ ರೂಪಿಸಲಾಗುವುದು. ಈ ಬಗ್ಗೆ ಕಂದಾಯ ಇಲಾಖೆ ಜತೆ ಚರ್ಚಿಸಿ ಅಗತ್ಯ ಬಿದ್ದರೆ ಸಂಪುಟದಲ್ಲಿ ಚರ್ಚಿಸಿ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಕಠಿಣ ಕ್ರಮ: ಅಪಾರ್ಟ್‍ಮೆಂಟ್ ನಿರ್ಮಾಣ ಮಾಡುವ ಬಿಲ್ಡರ್, ಡೆವಲಪರ್, ಪ್ರಮೋಟರ್ ಗಳು ಒಪ್ಪಂದದಂತೆ ನಿಗದಿತ ವೇಳೆಯಲ್ಲಿ ಪ್ಲಾಟ್ ಕೊಡದೆ ಅನಗತ್ಯ ಕಿರುಕುಳ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೆಲವೆಡೆ ಒಪ್ಪಂದದ ಮೊತ್ತಕ್ಕಿಂತ ಹೆಚ್ಚುವರಿ ಮೊತ್ತಕ್ಕೆ ಒತ್ತಾಯ ಮಾಡುತ್ತಿರುವ ಆರೋಪಗಳು ಕೇಳಿ ಬರುತ್ತಿದ್ದು ಆ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಹಕರಿಗೆ ವಂಚನೆ ಮಾಡುವ ಪ್ರಕರಣಗಳ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ರೇರಾ ವ್ಯಾಪ್ತಿಯಲ್ಲಿ ದೂರು ಪ್ರಕರಣಗಳು ಹೆಚ್ಚಾಗುತ್ತಿದ್ದು ನಿರ್ವಹಣೆ ಕಷ್ಟವಾಗುತ್ತಿದೆ. ಜತೆಗೆ ಅನಧಿಕೃತ ಬಡಾವಣೆಗಳ ಹಾವಳಿ ನಿಯಂತ್ರಣವೂ ಸವಾಲಾಗಿದೆ. ಹೀಗಾಗಿ ವಿಭಾಗೀಯ ಮಟ್ಟದಲ್ಲಿ ರೇರಾ ಕಚೇರಿ ಸ್ಥಾಪಿಸಲಾಗುವುದು ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ನಿರ್ಮಾಣ ಮಾಡುವ ಅನಧಿಕೃತ ಬಡಾವಣೆ, ಅಪಾರ್ಟ್‍ಮೆಂಟ್ ಗಳ ಬಗ್ಗೆಯೂ ಕ್ರಮ ಕೈಗೊಳ್ಳಬೇಕು. ರೇರಾ ಅನುಮತಿ ಇಲ್ಲದೆ ‘ಒಸಿ’ ನೀಡುವಂತಿಲ್ಲ ಎಂಬ ನಿಯಮ ಜಾರಿಗೆ ತರಲಾಗುವುದು. ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ರೇರಾ ಕಾರ್ಯದರ್ಶಿ ಇಬ್ರಾಹೀಂ ಮೈಗೂರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

''ಪ್ರತಿಷ್ಠಿತ ಕಂಪೆನಿಗಳ ವಿರುದ್ಧ ಕ್ರಮ''

ಪ್ರಾಜೆಕ್ಟ್‍ಗಳನ್ನು ನಿಗದಿಯಂತೆ ಪೂರ್ಣಗೊಳಿಸದೆ ಗ್ರಾಹಕರಿಗೆ ವಂಚಿಸಿದ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ನಿತೇಶ್, ಮಂತ್ರಿ ಡೆವಲಪರ್ಸ್ ಸೇರಿದಂತೆ ಪ್ರತಿಷ್ಠಿತ ಹತ್ತು ಕಂಪೆನಿಗಳು ರೇರಾಗೆ 340 ಕೋಟಿ ರೂ.ದಂಡದ ಮೊತ್ತ ಬಾಕಿ ಉಳಿಸಿಕೊಂಡಿರುವ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದಾಗ, ಸಿಡಿಮಿಡಿಗೊಂಡ ಸಚಿವ ಝಮೀರ್ ಅಹ್ಮದ್, ವರ್ಷಗಟ್ಟಲೆ ಇವರನ್ನು ಹೇಗೆ ಬಿಟ್ಟು ಕೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು. ತಕ್ಷಣ ಜಿಲ್ಲಾಧಿಕಾರಿ ಹಾಗೂ ಬಿಬಿಎಎಂಪಿ ಆಯುಕ್ತರ ಸಭೆ ಕರೆದು ಆ ಕಂಪೆನಿಗಳ ಯಾವುದೆ ಪ್ರಾಜೆಕ್ಟ್‍ಗೆ ಅನುಮತಿ ನೀಡದಂತೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅದೇ ಸಂಸ್ಥೆಗಳು ಬೇರೆ ಹೆಸರಿನಲ್ಲಿ ಕಂಪೆನಿ ತೆರೆದಿದ್ದರೂ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

share
Next Story
X