Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೈಯಪ್ಪನಹಳ್ಳಿ ಬಳಿ ಎನ್‍ಜಿಇಎಫ್...

ಬೈಯಪ್ಪನಹಳ್ಳಿ ಬಳಿ ಎನ್‍ಜಿಇಎಫ್ ಜಾಗದಲ್ಲಿ ವಿಶ್ವದರ್ಜೆಯ ವೃಕ್ಷೋದ್ಯಾನ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್

20 Jun 2023 7:38 PM IST
share
ಬೈಯಪ್ಪನಹಳ್ಳಿ ಬಳಿ ಎನ್‍ಜಿಇಎಫ್ ಜಾಗದಲ್ಲಿ ವಿಶ್ವದರ್ಜೆಯ ವೃಕ್ಷೋದ್ಯಾನ ಅಭಿವೃದ್ಧಿ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜೂ.20: ನಗರದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ಹತ್ತಿರವಿರುವ ಎನ್‍ಜಿಇಎಫ್‍ಗೆ ಸೇರಿದ ಜಾಗದಲ್ಲಿ 30 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ವಿಶ್ವ ದರ್ಜೆಯ ವೃಕ್ಷೋದ್ಯಾನ (ಟ್ರೀ ಪಾರ್ಕ್) ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ಇಲ್ಲಿ ಏರ್ಪಡಿಸಲಾಗಿದ್ದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಪ್ರಾಥಮಿಕ ಸುತ್ತಿನ ಸಭೆ ನಡೆಸಿ ಮಾತನಾಡಿದ ಅವರು, ಎನ್‍ಜಿಇಎಫ್‍ಗೆ ಸೇರಿದ 105 ಎಕರೆ ಜಾಗವನ್ನು ಹಾಗೆಯೇ ಉಳಿಸಿಕೊಂಡು, ವೃಕ್ಷೋದ್ಯಾನ ಅಭಿವೃದ್ಧಿಪಡಿಸುವ ಮೂಲಕ ಮನೋಹರವಾದ ಪ್ರವಾಸಿ ತಾಣವನ್ನಾಗಿ ಮಾಡಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಎನ್‍ಜಿಇಎಫ್‍ಗೆ ಸೇರಿದ ಜಾಗದ ಪೈಕಿ 70 ಎಕರೆಯಲ್ಲಿ ದಟ್ಟ ಹಸಿರಿದ್ದು, ನಾನಾ ಪ್ರಭೇದಗಳ ಸಾವಿರಾರು ವೃಕ್ಷಗಳಿವೆ. ಜತೆಗೆ ಐದು ಕೈಗಾರಿಕಾ ಶೆಡ್‍ಗಳಿವೆ. ಇವುಗಳನ್ನು ಹಾಗೆಯೇ ಉಳಿಸಿಕೊಂಡು ಹಂತ-1ಎಯಲ್ಲಿ 11 ಕೋಟಿ ರೂ. ಮತ್ತು ಹಂತ-1ಬಿನಲ್ಲಿ 15 ಕೋಟಿ ರೂ. ವೆಚ್ಚ ಮಾಡಿ ವೃಕ್ಷೋದ್ಯಾನ ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ ವೈ-ಫೈ ಸೌಲಭ್ಯದೊಂದಿಗೆ ‘ರೆಡಿಮೇಡ್ ವರ್ಕ್‍ಸ್ಪೇಸ್' ಕೂಡ ಇರಲಿದೆ. ಬಳಿಕ ಹಂತ-2ರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಎಂ.ಬಿ.ಪಾಟೀಲ್ ಹೇಳಿದರು.

ಹಂತ-1ಎ ಯಲ್ಲಿ ಸ್ಕಲ್ಚರ್ ಕೋರ್ಟ್, 1.4 ಕಿ.ಮೀ ಉದ್ದದ ವಾಕ್‍ವೇ, ಫುಡ್‍ಕೋರ್ಟ್, ಎಲಿವೇಟೆಡ್ ವಾಕ್‍ವೇ ಮುಂತಾದ ಸೌಲಭ್ಯಗಳು ಬರಲಿವೆ. ಹಂತ-1ಬಿ ಯಲ್ಲಿ ಮಕ್ಕಳ ಆಟದ ತಾಣ, ಹೊರಾಂಗಣ ಜಿಮ್, ಸಾಕುಪ್ರಾಣಿಗಳ ಓಡಾಟಕ್ಕೆ ಅನುಕೂಲ, ಕಾರಂಜಿ, ವಾಚ್ ಟವರ್ ನಿರ್ಮಿಸಲಾಗುವುದು. ಹಂತ-2ರಲ್ಲಿ ಇನ್ನೋವೇಶನ್ ಹಬ್, ಕಲ್ಚರಲ್ ಹಬ್, ನರ್ಸರಿ, ಸ್ಪೋಟ್ರ್ಸ್ ಹಬ್, ಮಲ್ಟಿಪರ್ಪಸ್ ಥಿಯೇಟರ್‍ಗಳು ಇರಲಿವೆ ಎಂದು ಎಂ.ಬಿ ಪಾಟೀಲ್ ವಿವರಿಸಿದರು.

ಉದ್ದೇಶಿತ ವೃಕ್ಷೋದ್ಯಾನದಲ್ಲಿ ನಾಡಿನ ಸಂಸ್ಕೃತಿಯ ಪ್ರತಿಬಿಂಬ ಇರುವಂತೆ ನೋಡಿಕೊಳ್ಳಲಾಗುವುದು. ಇದರ ಜತೆಗೆ ಎನ್‍ಜಿಇಎಫ್‍ನ ಬೆಳವಣಿಗೆ, ಅದರ ಯಶಸ್ಸು ಇತ್ಯಾದಿಗಳನ್ನು ಬಿಂಬಿಸಲಾಗುವುದು. ಒಟ್ಟಿನಲ್ಲಿ ಬೆಂಗಳೂರಿನ ಹಸಿರನ್ನು ಉಳಿಸಿಕೊಂಡು, ಅಭಿವೃದ್ಧಿಯನ್ನು ಸಾಧಿಸಬೇಕು ಎನ್ನುವುದು ನಮ್ಮ ಒತ್ತಾಸೆಯಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಎನ್‍ಜಿಇಎಫ್ ಕಾರ್ಯನಿರ್ವಾಹಕ ನಿರ್ದೇಶಕಿ ಅರುಣಿ ಮತ್ತಿತರರು ಉಪಸ್ಥಿತರಿದ್ದರು.

share
Next Story
X