ಮಹಿಳೆ ನಾಪತ್ತೆ

ಮಂಗಳೂರು, ಜೂ.20: ತಾನು ಕೆಲಸ ಮಾಡುತ್ತಿದ್ದ ಕಚೇರಿಗೆ ಹೋಗಿ ಬರುವುದಾಗಿ ಹೇಳಿ ಹೋದ ನಮಿತಾ ಬಂಗೇರಾ (29) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸರಿಗೆ ದೂರು ನೀಡಲಾಗಿದೆ.
ಈಕೆಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಪತಿ ನಾಲ್ಕೂವರೆ ವರ್ಷಗಳಿಂದ ವಿದೇಶದಲ್ಲಿದ್ದಾರೆ. ನಮಿತಾ ಟೂರಿಸ್ಟ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು ಜೂ.19ರಂದು ಬೆಳಗ್ಗೆ ಸಂಬಳ ತರಲು ಕಚೇರಿಗೆ ಹೋಗುವುದಾಗಿ ತಿಳಿಸಿ ಹೋದವರು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
5.4 ಅಡಿ ಎತ್ತರ, ಬಿಳಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು ಕನ್ನಡ, ತುಳು, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡುತ್ತಾರೆ. ಗುಲಾಬಿ ಬಣ್ಣದ ಕುರ್ತಾ ಧರಿಸಿದ್ದರು. ಮಾಹಿತಿ ದೊರೆತವರು ಬರ್ಕೆ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
Next Story