Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೂ.26ರಿಂದ ಹೊಸ ಶಾಸಕರಿಗೆ ಮೂರು ದಿನ...

ಜೂ.26ರಿಂದ ಹೊಸ ಶಾಸಕರಿಗೆ ಮೂರು ದಿನ ವಿಶೇಷ ತರಬೇತಿ ಶಿಬಿರ: ಸ್ಪೀಕರ್ ಯು.ಟಿ ಖಾದರ್‌

''ಹಿರಿಯ ಶಾಸಕರ ಜೊತೆ ಸಂವಾದ ಕಾರ್ಯಕ್ರಮ''

21 Jun 2023 8:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜೂ.26ರಿಂದ ಹೊಸ ಶಾಸಕರಿಗೆ ಮೂರು ದಿನ ವಿಶೇಷ ತರಬೇತಿ ಶಿಬಿರ: ಸ್ಪೀಕರ್ ಯು.ಟಿ ಖಾದರ್‌
''ಹಿರಿಯ ಶಾಸಕರ ಜೊತೆ ಸಂವಾದ ಕಾರ್ಯಕ್ರಮ''

ಬೆಂಗಳೂರು, ಜೂ. 21: ಹದಿನಾರನೆ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70ಕ್ಕೂ ಹೆಚ್ಚು ಮಂದಿ ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದ್ದು, ಜಮಾತ್ ಎ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ಹಲವರು ಶಿಬಿರದ ಸಂವಾದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಜೂ.26ರಿಂದ ಜೂ.28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದೆ. ಈ ಮೂರು ದಿನಗಳ ಕಾಲ ಈ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರ ವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು, ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯ ವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ವಿವರಿಸಿದರು.

ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ ಎಂದು ಹೇಳಿದರು.

ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಮತ್ತು ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆ ಬಿಂಬಿಸುವುದೇ ಶಿಬಿರದ ಉದ್ದೇಶವಾಗಿದೆ. ಈ ಕುರಿತು ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದ್ದು, ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದರು. 

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನ ಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನ ಮಂಡಲದ ಕಾರ್ಯ ಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದನದ ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ ಎಂದು ಖಾದರ್ ಉಲ್ಲೇಖಿಸಿದರು.

ಸಂವಾದ..!

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಡಾ.ಗುರುರಾಜ ಕಜರ್ಗಿ, ಜಮಾತ್ ಎ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಸೇರಿದಂತೆ ಪ್ರಮುಖರು ಶಿಬಿರದ ಸಂವಾದದಲ್ಲಿ ಪಾಲ್ಗೊಂಡು ವಿಷಯ ಮಂಡನೆ ಮಾಡಲಿದ್ದಾರೆ. ಜತೆಗೆ, ಪತ್ರಿಕಾರಂಗ-ಶಾಸಕರು ಹೇಗಿರಬೇಕೆಂಬ ವಿಚಾರದ ಬಗ್ಗೆ ಮಾಹಿತಿ ಕೊಡಲಿದ್ದಾರೆ ಎಂದು ಯು.ಟಿ.ಖಾದರ್ ತಿಳಿಸಿದರು.

ಸಚಿವಾಲಯ ಸಿಬ್ಬಂದಿಗೆ ಆರೋಗ್ಯ ಭಾಗ್ಯ: ವಿಧಾನಸಭೆ ಸಚಿವಾಲಯದ ನೌಕರರಿಗೆ ಆರೋಗ್ಯ ಭಾಗ್ಯ ಯೋಜನೆ ಜಾರಿ ಮಾಡಿದ್ದು, ಸೂಚಿಸಿದ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಅದೇರೀತಿ, ವಿಧಾನಸಭೆಯನ್ನು ಡಿಜಟಲೀಕರಣ ಮಾಡುವ ಬಗ್ಗೆ ಚಿಂತನೆ ಇದೆ. ದೇಶದಲ್ಲೆ ರಾಜ್ಯ ವಿಧಾನಸಭೆಯನ್ನು ಮಾದರಿ ವಿಧಾನನಸಭೆಯನ್ನಾಗಿ ಮಾಡುವ ಉದ್ದೇಶ ಇದೆ ಎಂದು ಎಂದು ಯು.ಟಿ.ಖಾದರ್ ನುಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X