Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಕ್ಕೆ ಕೂಡಲೇ ಅಕ್ಕಿ ಪೂರೈಕೆ ಮಾಡಿ:...

ರಾಜ್ಯಕ್ಕೆ ಕೂಡಲೇ ಅಕ್ಕಿ ಪೂರೈಕೆ ಮಾಡಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

21 Jun 2023 7:27 PM IST
share
ರಾಜ್ಯಕ್ಕೆ ಕೂಡಲೇ ಅಕ್ಕಿ ಪೂರೈಕೆ ಮಾಡಿ: ಸಮಾನ ಮನಸ್ಕರ ಒಕ್ಕೂಟ ಆಗ್ರಹ

ಬೆಂಗಳೂರು, ಜೂ. 21: ಕೇಂದ್ರ ಸರಕಾರ ಸಂವಿಧಾನದ ಒಕ್ಕೂಟ ತತ್ವಗಳಿಗೆ ಅನುಗುಣವಾಗಿ, ರಾಜ್ಯ ಸರಕಾರಗಳು ಸಲ್ಲಿಸುವ ಮನವಿಗೆ ಪೂರಕವಾಗಿ ಸ್ಪಂದಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಕ್ಕೆ ಅಗತ್ಯ ಅಕ್ಕಿಯನ್ನು ಕೂಡಲೇ ಪೂರೈಕೆ ಮಾಡಬೇಕು ಎಂದು ‘ಸಮಾನ ಮನಸ್ಕರ ಒಕ್ಕೂಟ-ಕರ್ನಾಟಕ ಆಗ್ರಹಿಸಿದೆ.

ಬುಧವಾರ ಈ ಸಂಬಂಧ ಹಿರಿಯ ಸಾಹಿತಿಗಳಾದ ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಡಾ.ನಿರಂಜನಾರಾಧ್ಯ ವಿ.ಪಿ., ದಿನೇಶ್ ಅಮಿನಮಟ್ಟು ಸೇರಿದಂತೆ ಇನ್ನಿತರರು ಪ್ರಕಟನೆ ನೀಡಿದ್ದು, ‘ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ 2030ರ ಹೊತ್ತಿಗೆ ಹಸಿವು ಮುಕ್ತ ಜಗತ್ತನ್ನು ಸೃಷ್ಟಿಸುವ ಗುರಿ ಹೊಂದಿದೆ. ಪ್ರಪಂಚದಾದ್ಯಂತ 720ಮಿಲಿಯನ್ ಮತ್ತು 811ಮಿಲಿಯನ್ ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಹಾಗೆಯೇ 2.4ಶತಕೋಟಿ ಜನರು ಅಥವಾ ಪ್ರಪಂಚದ ಜನಸಂಖ್ಯೆಯ ಶೇ.30ಕ್ಕಿಂತ ಹೆಚ್ಚು ಜನರು ತೀವ್ರವಾಗಿ ಆಹಾರ-ಅಭದ್ರತೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.

ಕೋವಿಡ್ ಬಿಕ್ಕಟ್ಟು ಹಸಿವಿನ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿದೆ ಮತ್ತು ಎಲ್ಲ ರೀತಿಯ ಅಪೌಷ್ಟಿಕತೆಯನ್ನು ಉಲ್ಬಣಗೊಳಿಸಿದೆ. 2ನೆ ಮಹಾಯುದ್ಧದ ನಂತರ ಅತಿದೊಡ್ಡ ಜಾಗತಿಕ ಆಹಾರ ಬಿಕ್ಕಟ್ಟನ್ನು ಸೃಷ್ಟಿಸುತ್ತಿದೆ. ಆಹಾರ ಅಭದ್ರತೆಯ ಪರಿಣಾಮಗಳ ಬೆಳಕಿನಲ್ಲಿ, ಪ್ರತಿಯೊಬ್ಬರ ಮೇಲೆ, ವಿಶೇಷವಾಗಿ ಬಡವರು ಮತ್ತು ಅತ್ಯಂತ ದುರ್ಬಲರ ಮೇಲೆ ಗಣನೀಯ ಪರಿಣಾಮ ಬೀರುವ ದೊಡ್ಡ ಆಘಾತಗಳ ಅಪಾಯವನ್ನು ತಗ್ಗಿಸಲು ಆಹಾರ ಪೂರೈಕೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದನ್ನು  ಖಚಿತಪಡಿಸಿಕೊಳ್ಳಲು ತ್ವರಿತ ಕ್ರಮಗಳ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಹೇಳುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರವು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಪ್ರತಿವ್ಯಕ್ತಿಗೆ 10ಕೆ.ಜಿ. ಉಚಿತ ಅಕ್ಕಿಯನ್ನು ವಿತರಣೆಗೆ ಮುಂದಾಗಿದೆ. ಈ ಕಾರ್ಯಕ್ರಮದ ಪರಿಣಾಮಕಾರಿ ಜಾರಿಗೆ ಕೇಂದ್ರದ ನೆರವನ್ನು ಕೋರಿ ಪತ್ರ ಬರೆದಿತ್ತು. ಇದೇ ವೇಳೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಎಫ್‍ಸಿಐ ಗೋದಾಮುಗಳಲ್ಲಿ 185.58 ಲಕ್ಷ ಟನ್ ಧಾನ್ಯಗಳ ಹೆಚ್ಚುವರಿ ದಾಸ್ತಾನು ಇದೆ. ಇದರಿಂದ ರಾಜ್ಯಕ್ಕೆ ಅಗತ್ಯವಿರುವ 1.66ಲಕ್ಷ ಟನ್ ಹೆಚ್ಚುವರಿ ಅಕ್ಕಿ ಕೊಡಲು ಕಷ್ಟವೇನಿಲ್ಲ. ಆದರೂ, ಮೋದಿ ನೇತೃತ್ವದ ಬಿಜೆಪಿ ಸರಕಾರ ನಿರಾಕರಿಸುತ್ತಿದೆ ಎಂದು ಅವರು ದೂರಿದ್ದಾರೆ.

ಕೇಂದ್ರ ಸರಕಾರವು ಸಂವಿಧಾನದ ಗಣತಂತ್ರ ಹಾಗು ಒಕ್ಕೂಟ ವ್ಯವಸ್ಥೆಯ ತತ್ವಗಳಿಗೆ ಅನುಗುಣವಾಗಿ, ಭಾರತವನ್ನು ವಿಶ್ವ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ 2ರ ಅನ್ವಯ ಹಸಿವು ಮುಕ್ತಗೊಳಿಸಲು ಮೊದಲ ಹೆಜ್ಜೆ ಇರಿಸಿರುವ ಕರ್ನಾಟಕ ಸರಕಾರವನ್ನು ಅಭಿನಂದಿಸಿ, ಸರಕಾರ ಸಲ್ಲಿಸಿರುವ ಬೇಡಿಕೆಯನ್ನು ಈಡೇರಿಸುವ ಮೂಲಕ ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಯನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

share
Next Story
X