ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ನಿವಾಸಿ ನಿತಿನ್ ಪೂಜಾರಿ (36) ಮೃತ ಯುವಕ. ನಿತಿನ್ ಬುಧವಾರ ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದ ಎನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು, ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡ ಅವರು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿ ಕೊಂಡಿದ್ದಾರೆ.
Next Story