ಎನ್ಐಟಿಕೆ ಸುರತ್ಕಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಸುರತ್ಕಲ್, ಜೂ.21: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ವತಿಯಿಂದ ಸಂಸ್ಥೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಆಯುಷ್ ಸಚಿವಾಲಯ ಮತ್ತು ಭಾರತ ಸರಕಾರದ ಶಿಕ್ಷಣ ಸಚಿವಾಲಯವು ಸೂಚಿಸಿದ ಸಾಮಾನ್ಯ ಯೋಗ ಪ್ರೋಟೋಕಾಲ್ ಪ್ರಕಾರ ಯೋಗ ಗುರು ರಾಧೇಶ್ ಮೋಹನ್ ದಾಸ್ ಅವರೊಂದಿಗೆ ಎನ್‌ಐಟಿಕೆ ನಿರ್ದೇಶಕರು, ರಿಜಿಸ್ಟ್ರಾರ್, ಡೀನ್ ವಿದ್ಯಾರ್ಥಿ ಕಲ್ಯಾಣ, ಡೀನ್ ಆರ್. ಮತ್ತು ಸಿ, ಡೀನ್ ಎಸಿಆರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ಎನ್ಐಟಿಕೆ ವಿದ್ಯಾರ್ಥಿಗಳು ವಿವಿಧ ಯೋಗ ಆಸನಗಳು ಮತ್ತು ಪ್ರಾಣಾಯಾಮವನ್ನು ಪ್ರದರ್ಶಿಸಿದರು.
ಇದೇ ವೇಳೆ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಎನ್‌ಐಟಿಕೆ ನಿರ್ದೇಶಕ ಪ್ರೊ. ರವಿ ಅವರು, ಜೀವನದ ಗುಣಮಟ್ಟ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಯೋಗದ ಮಹತ್ವದ ಕುರಿತು ಮಾತನಾಡಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆರಂಭಿಸಿ ವಿಶ್ವಾದ್ಯಂತ ಪ್ರಚಾರ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.
ಇದೇ ಸಂದರ್ಭ 2023ರ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಮಂಗಳವಾರ ಆಯೋಜಿಸಿದ್ದ 60 ನಿಮಿಷದಲ್ಲಿ 60 ಬಾರಿ “ಸೂರ್ಯ ನಮಸ್ಕಾರ” ಮಾಡುವ ಸ್ಪರ್ಧೆಯ ವಿಜೇತರನ್ನು ಎನ್‌ಐಟಿಕೆ ಸುರತ್ಕಲ್‌ನ ನಿರ್ದೇಶಕರು ಇದೇ ವೇಳೆ ಸನ್ಮಾನಿಸಿ ಗೌರವಿಸಿದರು.







