Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನರು ಮಣಿಪುರ ಸರಕಾರದಲ್ಲಿ ನಂಬಿಕೆ...

ಜನರು ಮಣಿಪುರ ಸರಕಾರದಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ: ಪ್ರಧಾನಿಗೆ ಬಿಜೆಪಿ ಶಾಸಕರ ಪತ್ರ

21 Jun 2023 10:13 PM IST
share
ಜನರು ಮಣಿಪುರ ಸರಕಾರದಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ: ಪ್ರಧಾನಿಗೆ ಬಿಜೆಪಿ ಶಾಸಕರ ಪತ್ರ

ಹೊಸದಿಲ್ಲಿ: ಪ್ರಧಾನಿ ಕಚೇರಿಗೆ ಅಹವಾಲೊಂದನ್ನು ಸಲ್ಲಿಸಿರುವ ಮಣಿಪುರದ ಒಂಭತ್ತು ಮೈತೀ ಶಾಸಕರು, ರಾಜ್ಯದ ಜನರು ಎನ್.ಬೀರೇನ್ ಸಿಂಗ್ ಸರಕಾರದಲ್ಲಿ ಸಂಪೂರ್ಣವಾಗಿ ನಂಬಿಕೆಯನ್ನು ಕಳೆದುಕೊಂಡಿದಾರೆ ಎಂದು ಹೇಳಿದ್ದಾರೆ. ಈ ಪೈಕಿ ಎಂಟು ಶಾಸಕರು ಬಿಜೆಪಿಗೆ ಸೇರಿದವರಾಗಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹಲವಾರು ಕ್ರಮಗಳ ಹೊರತಾಗಿಯೂ ತಳಮಟ್ಟದಲ್ಲಿ ಹೆಚ್ಚಿನ ಸುಧಾರಣೆ ಕಂಡು ಬಂದಿಲ್ಲ. ಸದ್ಯ ಸರಕಾರ ಮತ್ತು ಆಡಳಿತದಲ್ಲಿ ಯಾವುದೇ ನಂಬಿಕೆ ಉಳಿದಿಲ್ಲ. ಸಾರ್ವಜನಿಕರು ಪ್ರಸ್ತುತ ರಾಜ್ಯ ಸರಕಾರದಲ್ಲಿ ಸಂಪೂರ್ಣವಾಗಿ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.

ಸರಕಾರದಿಂದ ಸರಿಯಾದ ಆಡಳಿತಕ್ಕಾಗಿ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಾಸಕರ ಗುಂಪು ತನ್ನ ಅಹವಾಲಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

ಈ ಶಾಸಕರ ಗುಂಪು ಅಹವಾಲು ಸಲ್ಲಿಸಿದ ದಿನವೇ ಮಣಿಪುರದ 30 ಶಾಸಕರ ಇನ್ನೊಂದು ಗುಂಪು ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿತ್ತು. ಒಂಭತ್ತು ಶಾಸಕರ ಪೈಕಿ ಓರ್ವರಾಗಿರುವ ನಿಶಿಕಾಂತ ಸಪಮ್ ಅವರು, ಇದಕ್ಕೆ ತಪ್ಪು ಸಂವಹನ ಕಾರಣವಾಗಿದೆ ಮತ್ತು ರಾಜ್ಯ ಬಿಜೆಪಿಯಲ್ಲಿ ಬಣಗಳಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ಈಗ ಅಂತರ್ಯುದ್ಧದ ರೂಪವನ್ನು ಪಡೆದುಕೊಂಡಿದ್ದು, ಈವರೆಗೆ 100ಕ್ಕೂ ಅಧಿಕ ಜನರು ಮೃತಪಟ್ಟು 300ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಸ್ಥಳಾಂತರಗೊಂಡಿದ್ದು, ಸುಮಾರು 60,000 ಜನರು 350 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

10 ವಿರೋಧ ಪಕ್ಷಗಳ ಪ್ರತಿನಿಧಿಗಳು ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿಯವರಿಗೆ ಅಹವಾಲು ಸಲ್ಲಿಸಲು ಬಯಸಿದ್ದರು ,ಆದರೆ ಅವರಿಗೆ ಭೇಟಿಗೆ ಸಮಯ ಸಿಕ್ಕಿಲ್ಲ ಎಂದು ಮಂಗಳವಾರ ಟ್ವೀಟಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಪ್ರಧಾನಿ ಏಕೆ ಮಣಿಪುರದ ಕುರಿತು ಅಷ್ಟೊಂದು ಕಠೋರ,‌ ಸಂವೇದನಾಹೀನ ಮತ್ತು ಮೌನವಾಗಿದ್ದಾರೆ? ಅದನ್ನು ಬಣ್ಣಿಸಲು ‘ಆಘಾತಕಾರಿ’ ಎನ್ನುವುದು ಸೌಮ್ಯ ಪದವಾಗುತ್ತದೆ ಎಂದು ಹೇಳಿದ್ದರು. 

ಮಣಿಪುರದಲ್ಲಿ ಹಿಂಸಾಚಾರ ಹರಡಲು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳ ಒಡೆದು ಆಳುವ ರಾಜಕೀಯವು ಕಾರಣವಾಗಿದೆ ಎಂದು ವಿರೋಧ ಪಕ್ಷಗಳು ಅಹವಾಲಿನಲ್ಲಿ ಆರೋಪಿಸಿವೆ.

share
Next Story
X