Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಷ್ಕರೆ ಭಯೋತ್ಪಾದಕನ ವಿರುದ್ಧ ಪ್ರಸ್ತಾವ...

ಲಷ್ಕರೆ ಭಯೋತ್ಪಾದಕನ ವಿರುದ್ಧ ಪ್ರಸ್ತಾವ ತಡೆದಿದ್ದಕ್ಕಾಗಿ ಚೀನಾಕ್ಕೆ ಭಾರತದ ಟೀಕೆ

21 Jun 2023 10:22 PM IST
share
ಲಷ್ಕರೆ ಭಯೋತ್ಪಾದಕನ ವಿರುದ್ಧ ಪ್ರಸ್ತಾವ ತಡೆದಿದ್ದಕ್ಕಾಗಿ ಚೀನಾಕ್ಕೆ ಭಾರತದ ಟೀಕೆ

ಹೊಸದಿಲ್ಲಿ: ಲಷ್ಕರೆ ತಯ್ಯಿಬಾದ ಸಾಜಿದ್ ಮಿರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವ ಪ್ರಸ್ತಾವಕ್ಕೆ ಚೀನಾ ತಡೆಯನ್ನೊಡ್ಡಿರುವ ಹಿನ್ನೆಲೆಯಲ್ಲಿ ಭಾರತವು, ಜಾಗತಿಕ ಭಯೋತ್ಪಾದನೆ ನಿಗ್ರಹ ವ್ಯವಸ್ಥೆಯಲ್ಲಿ ನಿಜಕ್ಕೂ ಏನೋ ತಪ್ಪಿದೆ ಎಂದು ತಾನು ಭಾವಿಸಿರುವುದಾಗಿ ಬುಧವಾರ ಹೇಳಿದೆ.

‘ಕ್ಷುಲ್ಲಕ ಭೂರಾಜಕೀಯ ಹಿತಾಸಕ್ತಿಗಳಿಗಾಗಿ ವಿಶ್ವಾದ್ಯಂತ ದೇಶಗಳು ಮತ್ತು ವಿಶ್ವಸಂಸ್ಥೆ ನಿಷೇಧಿಸಿರುವ ಸ್ಥಾಪಿತ ಭಯೋತ್ಪಾದಕರನ್ನು ತಲುಪಲು ನಮಗೆ ಸಾಧ್ಯವಾಗದಿದ್ದರೆ ಭಯೋತ್ಪಾದನೆಯ ಸವಾಲಿನ ವಿರುದ್ಧ ಪ್ರಾಮಾಣಿಕವಾಗಿ ಹೋರಾಡಲು ರಾಜಕೀಯ ಇಚ್ಛೆಯನ್ನು ನಾವು ನಿಜಕ್ಕೂ ಹೊಂದಿಲ್ಲ ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಕಾಶ ಗುಪ್ತಾ ಹೇಳಿದರು. ಅವರು ಬುಧವಾರ ವಿಶ್ವಸಂಸ್ಥೆಯಲ್ಲಿ ಭಯೋತ್ಪಾದನೆ ನಿಗ್ರಹ ಕುರಿತು ಉನ್ನತ ಮಟ್ಟದ ಸಮ್ಮೇಳನದ ಅಧಿವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮಿರ್ 2008ರ ಮುಂಬೈ ಭಯೋತ್ಪಾದಕ ದಾಳಿಗಳ ಪ್ರಮುಖ ಆರೋಪಿಗಳಲ್ಲಿ ಓರ್ವನಾಗಿದ್ದಾನೆ.

ಅಮೆರಿಕವು ಮಿರ್ ತಲೆಗೆ ಐದು ಮಿ.ಡಾ.(ಸುಮಾರು41 ಕೋ.ರೂ.)ಗಳ ಬಹುಮಾನವನ್ನು ಘೋಷಿಸಿದೆ. 2022,ಜೂನ್‌ ನಲ್ಲಿ ಪಾಕಿಸ್ತಾನದ ನ್ಯಾಯಾಲಯವೊಂದು ಆತನಿಗೆ 15 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಲ್ ಖಾಯಿದಾ ನಿರ್ಬಂಧಗಳ ಸಮಿತಿಯಡಿ ಮಿರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಕಪ್ಪುಪಟ್ಟಿಗೆ ಸೇರಿಸುವಂತೆ ಮತ್ತು ಆತನ ಆಸ್ತಿಗಳ ಸ್ಥಗಿತ, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿಷೇಧಕ್ಕೆ ಒಳಪಡಿಸುವಂತೆ ಭಾರತ ಮತ್ತು ಅಮೆರಿಕ ಪ್ರಸ್ತಾವವನ್ನು ಮಂಡಿಸಿದ್ದವು. ಚೀನಾ ಮಂಗಳವಾರ ಈ ಪ್ರಸ್ತಾವಕ್ಕೆ ತಡೆಯೊಡ್ಡಿದೆ.

ಮುಂಬೈ ಭಯೋತ್ಪಾದಕ ದಾಳಿಗಳ 15 ವರ್ಷಗಳ ನಂತರವೂ ರೂವಾರಿಗಳನ್ನು ನ್ಯಾಯದ ಕಟಕಟೆಗೆ ತರಲಾಗಿಲ್ಲ ಮತ್ತು ಅವರಲ್ಲಿ ಕೆಲವರು ಸಂಪೂರ್ಣ ಸರಕಾರಿ ಆತಿಥ್ಯದೊಂದಿಗೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ ಎಂದು ಗುಪ್ತಾ ಬುಧವಾರ ಹೇಳಿದರು.

ಕಳೆದ ವರ್ಷ ಲಷ್ಕರೆ ತಯ್ಯಿಬಾದ ಮುಖ್ಯಸ್ಥ ಹಫೀಝ್ ಸಯೀದ್ ಪುತ್ರ ತಲ್ಹಾ ಸಯೀದ್ ನನ್ನು ಭಯೋತ್ಪಾದಕ ಎಂದು ಘೋಷಿಸುವ ಭಾರತದ ಪ್ರಯತ್ನಕ್ಕೂ ಚೀನಾ ಕಲ್ಲುಹಾಕಿತ್ತು.

share
Next Story
X