Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಕಾಂಗ್ರೆಸ್ ಉದ್ದೇಶಿಸಿ ಮೋದಿ...

ಅಮೆರಿಕ ಕಾಂಗ್ರೆಸ್ ಉದ್ದೇಶಿಸಿ ಮೋದಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸಿದ ಇಬ್ಬರು ಅಮೆರಿಕ ಸಂಸದರು

22 Jun 2023 12:12 PM IST
share
ಅಮೆರಿಕ ಕಾಂಗ್ರೆಸ್ ಉದ್ದೇಶಿಸಿ ಮೋದಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸಿದ ಇಬ್ಬರು ಅಮೆರಿಕ ಸಂಸದರು

ವಾಷಿಂಗ್ಟನ್: ಅಲ್ಪಸಂಖ್ಯಾತ ಸಮುದಾಯಗಳನ್ನು ನರೇಂದ್ರ ಮೋದಿ  (Prime Minister (PM) Narendra Modi) ನೇತೃತ್ವದ ಸರ್ಕಾರ ಹತ್ತಿಕ್ಕಿದೆ ಎಂದು ಆರೋಪಿಸಿ ಗುರುವಾರ ಅಮೆರಿಕಾ ಜಂಟಿ ಕಾಂಗ್ರೆಸ್  ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸುತ್ತಿರುವುದಾಗಿ ಅಮೆರಿಕಾ ಡೆಮಾಕ್ರಟಿಕ್ ಪಕ್ಷದ ಇಬ್ಬರು ಮುಸ್ಲಿಂ ಮಹಿಳಾ ಕಾಂಗ್ರೆಸ್ ಸದಸ್ಯರಾದ ಇಲ್ಹಾನ್ ಉಮರ್ ಹಾಗೂ ರಶೀದಾ ತ್ಲೈಬ್ (Ilhan Omar and Rashida Tlaib) ಪ್ರಕಟಿಸಿದ್ದಾರೆ ಎಂದು livemint.com ವರದಿ ಮಾಡಿದೆ.

"ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಗಳನ್ನು ಹತ್ತಿಕ್ಕಿದೆ. ಉಗ್ರವಾದಿ ಹಿಂದೂ ರಾಷ್ಟ್ರೀಯತಾವಾದಿ ಗುಂಪುಗಳಿಗೆ ಕುಮ್ಮಕ್ಕು ನೀಡಿದೆ ಹಾಗೂ ಪತ್ರಕರ್ತರು, ಮಾನವ ಹಕ್ಕು ಕಾರ್ಯಕರ್ತರನ್ನು ನಿರಂಕುಶವಾಗಿ ಗುರಿಯಾಗಿಸಿಕೊಂಡಿದೆ. ಹೀಗಾಗಿ ನಾನು ಮೋದಿ ಭಾಷಣ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ" ಎಂದು ಮೋದಿ ಭಾಷಣ ಕಾರ್ಯಕ್ರಮಕ್ಕೂ ಮುನ್ನ ಇಲ್ಹಾನ್ ಉಮರ್ ತಿಳಿಸಿದ್ದಾರೆ.

ರಶೀದಾ ತ್ಲೈಬ್ ಕೂಡಾ, "ರಾಷ್ಟ್ರ ರಾಜಧಾನಿಯಲ್ಲಿ ಮೋದಿಗೆ ವೇದಿಕೆ ಕಲ್ಪಿಸಿರುವುದು ಅಪಮಾನಕಾರಿಯಾಗಿದೆ. ಮಾನವ ಹಕ್ಕು ಕಾರ್ಯಕರ್ತರ ಮೇಲಿನ ದಬ್ಬಾಳಿಕೆ, ಪ್ರಜಾತಂತ್ರ ವಿರೋಧಿ ಕ್ರಮಗಳು, ಮುಸ್ಲಿಮರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿರುವುದು ಹಾಗೂ ಪತ್ರಕರ್ತರಿಗೆ ಸೆನ್ಸಾರ್ ಹೇರಿರುವ ಅವರ ಇತಿಹಾಸ ಅಸ್ವೀಕಾರಾರ್ಹವಾಗಿದೆ. ನಾನು ಮೋದಿಯವರ ಜಂಟಿ ಕಾಂಗ್ರೆಸ್  ಅಧಿವೇಶನ ಭಾಷಣವನ್ನು ಬಹಿಷ್ಕರಿಸುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.

Hindustan Times ಪತ್ರಿಕೆಯಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾನವ ಹಕ್ಕು ವಿಷಯಗಳನ್ನು ಪ್ರಸ್ತಾಪಿಸುವಂತೆ ಸುಮಾರು 75 ಮಂದಿ ಡೆಮಾಕ್ರಟಿಕ್ ಸೆನೆಟರ್‌ಗಳು ಹಾಗೂ ಜನಪ್ರತಿನಿಧಿಗಳ ಸಭೆಯ ಸದಸ್ಯರು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.

ಈ ಪತ್ರದಲ್ಲಿ, "ಭಾರತದ ಪ್ರಜೆಗಳ ಆಯ್ಕೆಯಾದ ಯಾವುದೇ ನಿರ್ದಿಷ್ಟ ನಾಯಕ ಅಥವಾ ರಾಜಕೀಯ ಪಕ್ಷವನ್ನು ನಾವು ಅನುಮೋದಿಸುವುದಿಲ್ಲ. ಆದರೆ, ಅಮೆರಿಕಾ ವಿದೇಶಾಂಗ ನೀತಿಯ ಮುಖ್ಯ ಭಾಗವಾಗಿರಬೇಕಾದ ಪ್ರಮುಖ ತತ್ವಗಳಿಗೆ ಬೆಂಬಲವಾಗಿ ನಿಲ್ಲುತ್ತೇವೆ" ಎಂದು ಹೇಳಲಾಗಿದೆ.

share
Next Story
X