Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ ಹೊತ್ತಿ ಉರಿಯುತ್ತಿರುವಾಗ...

ಮಣಿಪುರ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ಮೋದಿ ‘ವಿಶ್ವ ದರ್ಶನ’: ದಿಗ್ವಿಜಯ ಸಿಂಗ್ ವಾಗ್ದಾಳಿ

22 Jun 2023 1:17 PM IST
share
ಮಣಿಪುರ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ಮೋದಿ ‘ವಿಶ್ವ ದರ್ಶನ’: ದಿಗ್ವಿಜಯ ಸಿಂಗ್ ವಾಗ್ದಾಳಿ

ಹೊಸದಿಲ್ಲಿ: ಕಳೆದ ಒಂದೂವರೆ ತಿಂಗಳಿನಿಂದ ಮಣಿಪುರ ರಾಜ್ಯವು  ಹಿಂಸಾತ್ಮಕ ಜನಾಂಗೀಯ ಘರ್ಷಣೆಗಳಿಂದ ತತ್ತರಿಸಿರುವ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕಾ ಪ್ರವಾಸ ಹಾಗೂ  ಯೋಗ ಪ್ರದರ್ಶನದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ವಾಗ್ದಾಳಿ ನಡೆಸಿದರು.

ಮಣಿಪುರದಲ್ಲಿ  ಹಿಂಸಾಚಾರ ಮುಂದುವರಿದಿದ್ದರೂ ರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿದ್ದ ಪ್ರಧಾನಿ ಮೋದಿ ಹಾಗೂ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಾಗೂ  2008ರ ಮುಂಬೈ ದಾಳಿಯ ಆರೋಪಿ ಸಾಜಿದ್ ಮಿರ್‌ನನ್ನು ಜಾಗತಿಕ ಭಯೋತ್ಪಾದಕನಾಗಿ ಕಪ್ಪುಪಟ್ಟಿಗೆ ಸೇರಿಸುವ ಪ್ರಸ್ತಾಪವನ್ನು ಚೀನಾ ತಡೆದಿದ್ದಕ್ಕಾಗಿ ದಿಗ್ವಿಜಯ ಸಿಂಗ್  ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ.

"ಮಣಿಪುರ ಹೊತ್ತಿ ಉರಿಯುತ್ತಿದ್ದಾಗ ನಮ್ಮ ಪ್ರಧಾನಿ ವಿಶ್ವಸಂಸ್ಥೆಯಲ್ಲಿ ಯೋಗ ಮಾಡುತ್ತಿದ್ದರು. ಸಾಜಿದ್ ಮಿರ್‌ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಚೀನಾ ತಡೆಯೊಡ್ಡಿದಾಗ,  ನರೇಂದ್ರ ಮೋದಿ ಅವರು  ವಿಶ್ವಸಂಸ್ಥೆಯಲ್ಲಿ ಯೋಗ ಮಾಡುತ್ತಿದ್ದರು. ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದ್ದು ನಿಮಗೆ ನೆನಪಾಗುತ್ತಿಲ್ಲವೇ? . ಮೋದಿ ಆಡಳಿತವು ನೀರೋ ಆಡಳಿತದ ರೀತಿಯಲ್ಲಿ ಇಲ್ಲವೇ? ”ಎಂದು ಕಾಂಗ್ರೆಸ್ ನಾಯಕ ಪ್ರಧಾನಿಯನ್ನು ಟ್ಯಾಗ್ ಮಾಡಿ ಬರೆದಿದ್ದಾರೆ.

ಮಣಿಪುರದ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿಯವರ ಮೌನ ಹಾಗೂ  ಅವರ ಅಮೆರಿಕದ  ಭೇಟಿಯ ಬಗ್ಗೆ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ, ಈ ಸಮಯದಲ್ಲಿ ಕಲಹ ಪೀಡಿತ ರಾಜ್ಯದಲ್ಲಿ ಆತಂಕ ನೆಲೆಸಿದೆ. ಇಲ್ಲಿಯವರೆಗೆ ಜನಾಂಗೀಯ ಘರ್ಷಣೆಯಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

What do you say of a Prime Minister who is on a “Global Darshan” when Manipur is burning? @PMOIndia @INCIndia @BJP4India https://t.co/IpvOf3RnLY https://t.co/jaaxn4jMF9

— digvijaya singh (@digvijaya_28) June 22, 2023
share
Next Story
X