ಉಳ್ಳಾಲ: ಮನೆಮನೆಗಳಿಂದ ಕಸ ಸಂಗ್ರಹ ಆರಂಭಿಸಿದ ನಗರಸಭೆ
ಉಳ್ಳಾಲ, ಜೂ.22: ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ತೀವ್ರವಾಗಿ ಉಲ್ಬಣಿಸಿರುವುದರಿಂದ ಜೂನ್ 22ರಿಂದ ಉಳ್ಳಾಲ ನಗರಸಭಾ ವ್ಯಾಪ್ತಿಯ ಮನೆ ಮನೆಗಳಿಂದ ಕಸ ಸಂಗ್ರಹ ಆರಂಭಿಸಲಾಗಿದೆ.
ಶುಕ್ರವಾರ ಹೊರತುಪಡಿಸಿ ವಾರದ ಎಲ್ಲ ದಿನಗಳಲ್ಲಿ ನಗರಸಭಾ ವಾಹನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುತ್ತದೆ. ಅದೇರೀತಿ ಪ್ರತಿ ಶುಕ್ರವಾರ ಮಾತ್ರ ಒಣ ಕಸವನ್ನು ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತೆ ವಾಣಿ ವಿ. ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





