Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಸ ಶಾಸಕರಿಗೆ ತರಬೇತಿ ನೀಡಲು...

ಹೊಸ ಶಾಸಕರಿಗೆ ತರಬೇತಿ ನೀಡಲು ವಿವಾದಿತರಿಗೆ ಆಹ್ವಾನ; ಸ್ಪೀಕರ್‌ ಖಾದರ್‌ ಗೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ಪತ್ರ

22 Jun 2023 5:56 PM IST
share
ಹೊಸ ಶಾಸಕರಿಗೆ ತರಬೇತಿ ನೀಡಲು ವಿವಾದಿತರಿಗೆ ಆಹ್ವಾನ; ಸ್ಪೀಕರ್‌ ಖಾದರ್‌ ಗೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ಪತ್ರ

ಬೆಂಗಳೂರು, ಜೂನ್‌ 22: 16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ಏರ್ಪಡಿಸಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸಲಿರುವ ಕೆಲವು ಭಾಷಣಕಾರರ ಹಿನ್ನೆಲೆಯ ಬಗ್ಗೆ ಹಲವರು ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ. 

ಇದೇ ವಿಚಾರವಾಗಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು, 'ಶಾಸಕರ ತರಬೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಬಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಬೇಕು' ಎಂದು ಆಗ್ರಹಿಸಿದ್ದಾರೆ.  

ರಮೇಶ್ ಬಾಬು ಅವರ ಪತ್ರದ ಸಾರಾಂಶ ಹೀಗಿದೆ...

''ಹದಿನಾರನೇ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ತಾವು ಆಯ್ಕೆ ಆಗುವುದರ ಮೂಲಕ ಕರ್ನಾಟಕದ ಸಂಸದೀಯ ವ್ಯವಸ್ಥೆಯಲ್ಲಿ ಹೊಸ ಪರಿಕಲ್ಪನೆ ಮತ್ತು ವೈಚಾರಿಕ ಚಿಂತನೆಗಳಿಗೆ ಅವಕಾಶ ನೀಡುತ್ತೀರಿ ಎಂಬ ಭರವಸೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವ ಬಹುತೇಕರಿಗೆ ಇರುತ್ತದೆ. ತಾವು ನಡೆದು ಬಂದ ದಾರಿ ಮತ್ತು ಸೈದ್ಧಾಂತಿಕ ವಿಚಾರಗಳು ಸ್ಪೀಕರ್ ಸ್ಥಾನದ ಮೌಲ್ಯಗಳನ್ನು ಇಮ್ಮಡಿಗೊಳಿಸುವ ನಿರೀಕ್ಷೆ ನಮ್ಮದಾಗಿರುತ್ತದೆ''

''ಕರ್ನಾಟಕ ವಿಧಾನಸಭಾ ಸದಸ್ಯರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಆಯೋಜನೆ ಸಮಂಜಸವಾಗಿರುತ್ತದೆ. ಭೌದ್ದಿಕವಾಗಿ ಮತ್ತು ದೈಹಿಕವಾಗಿ ಶಾಸಕರನ್ನು ಗಟ್ಟಿಗೊಳಿಸುವ ಯಾವುದೇ ಪ್ರಯತ್ನ ಔಚಿತ್ಯಪೂರ್ಣವಾಗಿರುತ್ತದೆ. ಇಂತಹ ತರಬೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳು ಸಮಾಜಮುಖಿಗಳಾಗಿರಬೇಕು. ಇವರು ಜೀವನಬದ್ಧತೆ, ಗಟ್ಟಿತನದ ಮೌಲ್ಯ ಮತ್ತು ಸಂವಿಧಾನದ ಆಶಯಗಳಿಗೆ ಪೂರಕವಾಗಿ ವಿಶಾಲವಾದ ಮಾನವೀಯ ಮೌಲ್ಯಗಳ ಚಿಂತನೆಗಳನ್ನು ಹೊಂದಿರಬೇಕು. ಯಾವುದೇ ಒಂದು ಸಿದ್ದಾಂತಕ್ಕೆ ಅಂಟಿಕೊಂಡವರನ್ನು ಅಥವಾ ಪೂರ್ವಗ್ರಹ ಪೀಡಿತರಾಗಿ ಚಿಂತಿಸುವವರನ್ನು ತರಭೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಿಷಯ ಮಂಡನೆಗೆ ಅವಕಾಶ ನೀಡಿದರೆ, ಅಂತಹ ಬೋಧನೆಗಳು ಅಥವಾ ಚರ್ಚೆಗಳು ಶಿಬಿರದ ಒಟ್ಟಾರೆ ಮೌಲ್ಯಗಳನ್ನು ಕಳಂಕಗೊಳಿಸುತ್ತದೆ''

''ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಲು ಮತ್ತು ಕುವೆಂಪುರವರ ಸರ್ವಧರ್ಮಗಳ ಶಾಂತಿಯ ತೋಟದ ಕಲ್ಪನೆಗೆ ಭಂಗ ತರಲು ಪ್ರಯತ್ನಿಸಿದವರ ಹಿನ್ನೆಲೆಯನ್ನು, ತಂತ್ರಗಾರಿಕೆಯ ಪ್ರಯತ್ನವನ್ನು ತಾವು ಸೂಕ್ಷ್ಮವಾಗಿ ಗಮನಿಸಿರುತ್ತೀರಿ. ಅನೇಕ ಸಂದರ್ಭಗಳಲ್ಲಿ ಇಂತಹ ಶಕ್ತಿಗಳ ಕುತಂತ್ರಗಳನ್ನು ನೀವೂ ಸೇರಿದಂತೆ ನಾವೆಲ್ಲರೂ ಅಸಹಾಯಕರಾಗಿ ಎದುರಿಸಿದ ಪ್ರಸಂಗಗಳಿದೆ. ಇದರ ಹಿನ್ನೆಲೆಯಲ್ಲಿ ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸುವ ಕೆಲಸವನ್ನು ನಾವೆಲ್ಲರೂ ತರಬೇತಿ ಶಿಬಿರಗಳಲ್ಲಿ ನಿರೀಕ್ಷಿಸುತ್ತೇವೆ''

''ಹಿರಿಯ ಸಂಸದೀಯ ಪಟುಗಳ ಅನುಭವದ ಹಂಚಿಕೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ವಿಷಯಗಳಿಗೆ ಮತ್ತು ಈ ದೇಶದ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಹಾಗೂ ಅದಕ್ಕೆ ಅನುಗುಣವಾಗಿ ಶಾಸಕರು ಕರ್ತವ್ಯ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ತರಭೇತಿ ಶಿಬಿರದ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ತಾವು ಉದ್ದೇಶಿತ ತರಬೇತಿ ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕ ಬಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ದಯಮಾಡಿ ಇದನ್ನು ಮರುಪರಿಶೀಲಿಸಲು ಕೋರುತ್ತೇನೆ. ಕೆಲವು ನಿವೃತ್ತ ಅಧಿಕಾರಿಗಳು ತಮಗೆ ತಪ್ಪು ಮಾಹಿತಿ ನೀಡಿರುವ ಸಾದ್ಯತೆ ಇದ್ದು, ದಯಮಾಡಿ ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಶಿಬಿರದ ಸಂಪನ್ಮೂಲ ವ್ಯಕ್ತಿಗಳ ಕುರಿತು ಮರು ಪರಿಶೀಲಿಸಿ'' ಎಂದು ಪತ್ರದಲ್ಲಿ ರಮೇಶ್ ಬಾಬು ಮನವಿ ಮಾಡಿದ್ದಾರೆ. 

share
Next Story
X