Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತಿನಿತ್ಯ 1 ಠಾಣೆಗೆ ದಿಢೀರ್ ಭೇಟಿ,...

ಪ್ರತಿನಿತ್ಯ 1 ಠಾಣೆಗೆ ದಿಢೀರ್ ಭೇಟಿ, ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ: ಎಸ್ಪಿ, ಡಿಸಿಪಿಗಳಿಗೆ ಡಿಜಿಪಿ ಸೂಚನೆ

''ಅಪರಾಧ ಕೃತ್ಯಗಳ ಕಡಿವಾಣಕ್ಕೆ ನಿಗಾವಹಿಸಬೇಕು''

22 Jun 2023 6:11 PM IST
share
ಪ್ರತಿನಿತ್ಯ 1 ಠಾಣೆಗೆ ದಿಢೀರ್ ಭೇಟಿ, ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ: ಎಸ್ಪಿ, ಡಿಸಿಪಿಗಳಿಗೆ ಡಿಜಿಪಿ ಸೂಚನೆ
''ಅಪರಾಧ ಕೃತ್ಯಗಳ ಕಡಿವಾಣಕ್ಕೆ ನಿಗಾವಹಿಸಬೇಕು''

ಬೆಂಗಳೂರು, ಜೂ.22: ‘ಎಲ್ಲ ವಿಭಾಗದ ಡಿಸಿಪಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿನಿತ್ಯ ಒಂದು ಪೊಲೀಸ್  ಠಾಣೆಗೆ ಭೇಟಿ ನೀಡಬೇಕು ಹಾಗೂ ವಾರಕ್ಕೊಮ್ಮೆ ರಾತ್ರಿ ಗಸ್ತು ನಡೆಸಿ, ಸಿಬ್ಬಂದಿ ಕಾರ್ಯನಿರ್ವಹಣೆ ಪರಿಶೀಲಿಸಿ ಅಪರಾಧ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬೇಕು ಎಂದು ಪೊಲೀಸ್ ಮಹಾ ನಿರ್ದೇಶಕ ಡಾ.ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.

ಗುರುವಾರ ಪೊಲೀಸ್ ಅಧಿಕಾರಿಗಳು, ಎಸ್‍ಪಿಗಳೊಂದಿಗೆ ನಡೆದ ಸಭೆಯಲ್ಲಿ ತಮ್ಮ ವ್ಯಾಪ್ತಿಗೆ ವಿವಿಐಪಿಗಳ ಭೇಟಿ ಹೊರತು ಪಡಿಸಿ ಎಲ್ಲ ದಿನಗಳಲ್ಲೂ ಠಾಣೆಗೆ ಭೇಟಿ ನೀಡಬೇಕು. ಠಾಣೆಯಲ್ಲಿ ಕರ್ತವ್ಯ ನಿರ್ವಹಣೆಯನ್ನು ಖುದ್ದು ಪರಿಶೀಲಿಸಬೇಕು. ನಂತರ ಇದರ ಬಗ್ಗೆ ತಮ್ಮ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಡಾ.ಅಲೋಕ್ ಮೋಹನ್ ಎಂದು ಸೂಚಿಸಿದರು.

ಡಿಸಿಪಿ ಹಾಗು ಎಸ್‍ಪಿಗಳು ಪೊಲೀಸ್ ಠಾಣೆಗಳಿಗೆ ಅನಿರೀಕ್ಷಿತವಾಗಿ ರಾತ್ರಿ ಸಂಚಾರ ಕೈಗೊಂಡು ಇ-ಬೀಟ್ ಪದ್ಧತಿ ಹಾಗೂ ರಾತ್ರಿಯ ಪಾಳಿಯ ಕರ್ತವ್ಯ ನಿರ್ವಹಣೆಯನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಡಿಜಿಪಿ ಡಾ.ಅಲೋಕ್ ಮೋಹನ್ ಆದೇಶಿಸಿದರು. ಬಂದೋಬಸ್ತ್ ಸೇರಿದಂತೆ ಕೆಲವು ತುರ್ತು ಸಂದರ್ಭಗಳ ಹೊರತುಪಡಿಸಿ ಪ್ರತಿದಿನ ಒಂದು ಠಾಣೆಗೆ ಭೇಟಿ ನೀಡಿ ಆ ಠಾಣೆಯ ಕಾರ್ಯನಿರ್ವಹಣೆ ಬಗ್ಗೆ ನಗರ ವ್ಯಾಪ್ತಿ ಡಿಸಿಪಿಗಳು ಪರಿಶೀಲಿಸಬೇಕು ಎಂದು ಮೋಹನ್ ನಿರ್ದೇಶನ ನೀಡಿದರು.

ಠಾಣೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾನ್‍ಸ್ಟೇಬಲ್, ಹೆಡ್ ಕಾನ್‍ಸ್ಟೇಬಲ್ ಮಾತ್ರವಲ್ಲದೆ ನಾಗರಿಕರೊಂದಿಗೆ ಸಂವಾದ ನಡೆಸಿ ಅಹವಾಲು ಆಲಿಸಬೇಕು. ಅಲ್ಲದೇ, ಠಾಣಾ ವ್ಯಾಪ್ತಿಯ ಅಪರಾಧ ಕೃತ್ಯಗಳು ಪತ್ತೆ ಡ್ರಗ್ಸ್ ವಿರುದ್ಧದ ಕ್ರಮ ಕಾನೂನು ಬಾಹಿರ ಚಟುವಟಿಕೆಗಳನ್ನು ಮೇಲೆ ವಹಿಸಿರುವ ಎಚ್ಚರಿಕೆ ಕ್ರಮಗಳ ಪರಾಮರ್ಶೆ ನಡೆಸಬೇಕು ಎಂದು ಡಾ.ಅಲೋಕ್ ಮೋಹನ್ ತಿಳಿಸಿದರು.

ರಾಜಿ ಮನೋಭಾವಗಳನ್ನು ತೆಗೆದು ಹಾಕಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮಾಣಿಕವಾಗಿ ಕೆಲಸ ಮಾಡಬೇಕು. ನಗರದಲ್ಲಿ ಸೈಬರ್ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ನುರಿತ ಸಿಬ್ಬಂದಿಗಳನ್ನು ಸೈಬರ್ ಪೊಲೀಸ್ ಠಾಣೆಗಳಿಗೆ ನಿಯೋಜಿಸಿ ದೂರುಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲು ಡಿಜಿಪಿ ಸೂಚನೆ ನೀಡಿದರು.
ಕೆಲ ಮತೀಯ ವ್ಯಕ್ತಿಗಳು, ಸಂಘಟನೆಗಳು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನಗಳನ್ನು ನಡೆಸುತ್ತಿದ್ದು, ಅವುಗಳ ವಿರುದ್ಧ ಹೆಚ್ಚಿನ ನಿಗಾವಹಿಸಬೇಕು ಎಂದು ಡಿಜಿಪಿ ತಾಕೀತು ಮಾಡಿದರು. 

ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ವಹಿಸಿ ಗುಪ್ತಚರ ದಳದಿಂದ ಬರುವ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಅಪರಾಧ ಕೃತ್ಯಗಳು ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವ ಆರೋಪಿಗಳು ತಂತ್ರಜ್ಞಾನ ಬಳಕೆ ಹೆಚ್ಚು ಮಾಡುತ್ತಿದ್ದು, ಅದಕ್ಕೆ ತಕ್ಕಂತೆ ಪೊಲೀಸರಿಗೆ ತರಬೇತಿ ನೀಡಬೇಕು ಎಂದು ಡಿಜಿಪಿ ಸೂಚನೆ ನೀಡಿದರು.

ನಗರ ಪೊಲೀಸ್ ಆಯುಕ್ತ ದಯಾನಂದ, ಹೆಚ್ಚುವರಿ ಆಯುಕ್ತ ಸತೀಶ್ ಕುಮಾರ್, ಜಂಟಿ ಆಯುಕ್ತ ಅನುಚೇತ್, ಶರಣಪ್ಪ ಎಲ್ಲ ವಿಭಾಗದ ಡಿಜಿಪಿಗಳು ಭಾಗವಹಿಸಿದ್ದರು.

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ:

‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಬಗ್ಗೆ ವಿಶೇಷ ನಿಗಾಕ್ಕೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆ, ಟ್ರಾಫಿಕ್ ಸುಧಾರಣೆಗೆ ಒತ್ತು ನೀಡಲಾಗುವುದು. ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆ ಅಳವಡಿಸಲು ಸೂಚಿಸಲಾಗಿದೆ. ಕೆಲ ಠಾಣೆಗಳಲ್ಲಿ ಫೋನ್ ನಂಬರ್ ಹಾಕದಿರುವ ಬಗ್ಗೆ ದೂರುಗಳು ಬಂದಿದ್ದು, ಕ್ರಮ ಕೈಗೊಳ್ಳುತ್ತೇವೆ’

- ಡಾ.ಅಲೋಕ್ ಮೋಹನ್, ಡಿಜಿ-ಐಜಿಪಿ

share
Next Story
X