ಜಲ್ಲಿಗುಡ್ಡೆ ಜಯನಗರ ರಸ್ತೆ ಕಾಂಕ್ರಿಟೀಕರಣಕ್ಕೆ ಸಿಪಿಎಂ ಮನವಿ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆಯಿಂದ ಜಯನಗರ ಪ್ರದೇಶಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿವೆ. ಸ್ಥಳೀಯ ನಿವಾಸಿಗಳ ಸುಗಮ ಸಂಚಾರಕ್ಕೆ ಬಹಳ ಅಡಚಣೆಯುಂಟಾಗಿದೆ. ರಸ್ತೆಯುದ್ದಕ್ಕೂ ಇರುವ ಗುಂಡಿಗಳಿಗೆ ಮಣ್ಣು ಮತ್ತು ಜಲ್ಲಿ ಮಿಶ್ರಣ ಮಾಡಿದ ಪರಿಣಾಮ ರಸ್ತೆ ಕೆಸರುಮಯವಾಗಿದೆ. ಹಾಗಾಗಿ ಈ ರಸ್ತೆಗೆ ಕಾಂಕ್ರಿಟ್ ಹಾಕಬೇಕು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಮನವಿ ಸಲ್ಲಿಸಿದೆ.
ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಉರುಳಿ ಬೀಳುವಂತಹ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ಮಾಡಲು, ನಡೆಯಲಯ ಸಾಧ್ಯವಾಗುತ್ತಿಲ್ಲ ಎಂದು ಸಿಪಿಎಂ ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.
ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್, ಬಜಾಲ್ ಜಲ್ಲಿಗುಡ್ಡೆ ಶಾಖಾ ಕಾರ್ಯದರ್ಶಿ ರೋಹಿನಿ ಜಲ್ಲಿಗುಡ್ಡೆ, ನಗರ ಸಮಿತಿ ಸದಸ್ಯರಾದ ದೀಪಕ್ ಬಜಾಲ್, ಬಶೀರ್ ಜಲ್ಲಿಗುಡ್ಡೆ, ಗೀತಾ ಜಲ್ಲಿಗುಡ್ಡೆ, ಮೋಹನ್ ಜಲ್ಲಿಗುಡ್ಡೆ, ಮುಸ್ತಫಾ ಕಲ್ಲಕಟ್ಟೆ ನಿಯೋಗದಲ್ಲಿದ್ದರು.





