Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಲ್ಲಿ ಪ್ರತಿ ಕಿ.ಮೀ. ಸೈಕಲ್ ಸವಾರಿಗೆ 16...

ಇಲ್ಲಿ ಪ್ರತಿ ಕಿ.ಮೀ. ಸೈಕಲ್ ಸವಾರಿಗೆ 16 ರೂ. ನೀಡುತ್ತೆ ಸರಕಾರ !

ವಾರ್ತಾಭಾರತಿವಾರ್ತಾಭಾರತಿ11 March 2019 9:12 PM IST
share
ಇಲ್ಲಿ ಪ್ರತಿ ಕಿ.ಮೀ. ಸೈಕಲ್ ಸವಾರಿಗೆ 16 ರೂ. ನೀಡುತ್ತೆ ಸರಕಾರ !

ಆ್ಯಮ್‌ಸ್ಟರ್‌ಡ್ಯಾಮ್ (ನೆದರ್‌ಲ್ಯಾಂಡ್ಸ್), ಮಾ. 11: ಕಾರುಗಳು ಅಥವಾ ಮೋಟರ್‌ ಬೈಕ್‌ಗಳಿಗಿಂತ ಸೈಕಲ್‌ ಗಳನ್ನೇ ಹೆಚ್ಚು ಇಷ್ಟಪಡುವ ಜಗತ್ತಿನ ಅಪರೂಪದ ದೇಶಗಳ ಪೈಕಿ ನೆದರ್‌ ಲ್ಯಾಂಡ್ಸ್ ಕೂಡ ಒಂದು.

ಒಂದು ಅಧ್ಯಯನದ ಪ್ರಕಾರ, ನೆದರ್‌ಲ್ಯಾಂಡ್ಸ್‌ನಲ್ಲಿ ಜನರಿಗಿಂತ ಹೆಚ್ಚು ಸೈಕಲ್‌ಗಳಿವೆ. ಇಲ್ಲಿನ ಜನರು ಸೈಕಲನ್ನು ಎಷ್ಟು ಇಷ್ಟ ಪಡುತ್ತಾರೆಂದರೆ, ರಾಜಧಾನಿ ಆ್ಯಮ್‌ಸ್ಟರ್‌ಡ್ಯಾಮ್‌ನಲ್ಲಿ ಮನೆ ಮತ್ತು ಕೆಲಸದ ನಡುವಿನ ಪ್ರಯಾಣದ ಅರ್ಧ ಭಾಗವನ್ನು ಸೈಕಲೇ ಆಕ್ರಮಿಸಿಕೊಂಡಿದೆ. ಹಾಗಾಗಿ, ನೆದರ್‌ಲ್ಯಾಂಡ್ಸ್ ತನ್ನನ್ನು ತಾನು ‘ಜಗತ್ತಿನ ಸರಿಸಾಟಿಯಿಲ್ಲದ ನಂಬರ್ ವನ್ ಸೈಕಲ್ ತುಳಿಯುವ ದೇಶ’ ಎಂಬುದಾಗಿ ಕರೆದುಕೊಂಡಿರುವುದರಲ್ಲಿ ಯಾವುದೇ ಅಚ್ಚರಿಯಿಲ್ಲ.

ಪ್ರತ್ಯೇಕ ಸೈಕಲ್ ಮಾರ್ಗ, ಸೈಕಲ್ ನಿಲ್ಲಿಸುವ ಸ್ಥಳ ಮತ್ತು ಸೈಕಲ್‌ಗಳ ಸುರಕ್ಷತೆಗಾಗಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸುವ ಮೂಲಕ ನೆದರ್‌ಲ್ಯಾಂಡ್ಸ್‌ ನಾದ್ಯಂತ ಸೈಕಲ್ ಸವಾರರಿಗೆ ಸರಕಾರ ಪ್ರೋತ್ಸಾಹ ನೀಡುತ್ತಿದೆ.

ಅದೇ ವೇಳೆ, ಸೈಕಲ್ ಸವಾರರಿಗೆ ಸರಕಾರವು ತೆರಿಗೆ ರಿಯಾಯಿತಿಗಳನ್ನೂ ನೀಡುತ್ತಿದೆ. ಪ್ರತಿ ಕಿಲೋಮೀಟರ್ ಸೈಕಲ್ ಸವಾರಿಗೆ ಅಲ್ಲಿನ ಜನರು ತೆರಿಗೆರಹಿತ 16 ರೂಪಾಯಿ ಗಳಿಸಬಹುದಾಗಿದೆ. ಈ ಹಣವನ್ನು ಜನರು ಕೆಲಸ ಮಾಡುವ ಕಂಪೆನಿ ನೀಡುತ್ತದೆ. ಇದಕ್ಕಿರುವ ಒಂದೇ ಒಂದು ಶರತ್ತೆಂದರೆ, ಕೆಲಸಕ್ಕೆ ಹೋಗುವಾಗ ಮಾಡುವ ಸೈಕಲ್ ಸವಾರಿಗೆ ಮಾತ್ರ ಈ ಪ್ರೋತ್ಸಾಹಧನ ಲಭಿಸುತ್ತದೆ. ಮನರಂಜನೆ ಅಥವಾ ಇತರ ವೈಯಕ್ತಿಕ ಉದ್ದೇಶಗಳಿಗಾಗಿ ಮಾಡುವ ಸೈಕಲ್ ಸವಾರಿಗೆ ಇದು ಅನ್ವಯಿಸುವುದಿಲ್ಲ.

ಬ್ರಿಟನ್, ಬೆಲ್ಜಿಯಮ್ ಸೇರಿದಂತೆ ಯುರೋಪ್‌ನ ಹೆಚ್ಚಿನ ದೇಶಗಳು ಪೆಟ್ರೋಲಿಯಂ ಉತ್ಪನ್ನಗಳನ್ನು ಬಳಸುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಸೈಕಲ್ ಕೊಂಡುಕೊಳ್ಳಲು ಜನರಿಗೆ ತೆರಿಗೆ ರಿಯಾಯಿತಿ ನೀಡುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X